ಹುಬ್ಬಳ್ಳಿ:ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ​ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಘಟನೆ ನಡೆದ ಮೊದಲ ದಿನ ನನ್ನ ಜೊತೆಗೆ ಇದ್ದವರು, ಇಂದು ನನ್ನ ಬೆನ್ನಿಗೆ ನಿಂತಿಲ್ಲ, ಘಟನೆ ವೈಯಕ್ತಿಕ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ ಅವರು ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದಲ್ಲಿ ಇದ್ದವರೇ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ ಮೂಲಕ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ.
ಇದನ್ನೂ ಓದಿ:ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ: ಗೃಹ ಸಚಿವ ಪರಮೇಶ್ವರ್
ನೇಹಾ ಹತ್ಯೆಯಲ್ಲಿ ಫಯಾಜ್ ಒಬ್ಬನೇ ಇಲ್ಲ, ಈತನ ಹಿಂದೆ ನಾಲ್ಕು ಜನರಿದ್ದಾರೆ. ಅವರ ಹೆಸರನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಪೋಲಿಸರಿಗೆ ಈ ಕುರಿತು ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದೇನೆ. ಇನ್ಟಾಗ್ರಾಂನಲ್ಲಿ ನನ್ನ ಮಗಳ ಹೆಸರಿನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ಅವಳ ಬಗ್ಗೆ ಸಮಾಜದಲ್ಲಿ ತಪ್ಪು ತಿಳುವಳಿಕೆ ಬರುವಂತೆ ಮಾಡಿದ್ದಾರೆ. ಆರೋಪಿ ಜೈಲಿನಲ್ಲಿದ್ದರು ಖಾತೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ಪತ್ತೆ ಹಚ್ಚಬೇಕು. ಈ ಕುರಿತು ವಕೀಲರೊಂದಿಗೆ ಮಾತನಾಡಿದ್ದೇನೆ.‌ ಸೈಬರ್ ಪೊಲೀಸರಿಗೆ ದೂರು ನೀಡಲಿದ್ದೇನೆ.
ಹಿಂದೆ ಆರೋಪಿ ಫಯಾಜ್​ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ತಂದೆಯನ್ನೇ ಪೊಲೀಸ್ ಠಾಣೆಯಲ್ಲಿ ಕೊಲೆ ಮಾಡಲು ಹೋಗಿದ್ದ, ಇದನ್ನು ಸಮಾಜದ ಮುಖಂಡರು ನನಗೆ ತಿಳಿಸಿದ್ದಾರೆ. ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದರೇ ನನ್ನ ಮಗಳ ರಕ್ಷಣೆಯನ್ನು ನಾನು ಮಾಡಿಕೊಳ್ಳುತ್ತಿದ್ದೆ, ಮಗಳು ಇಂದು ಬದುಕುಳಿಯುತ್ತಿದ್ದಳು ಎಂದು ನೇಹಾಳ ತಂದೆ ನಿರಂಜನ ಹಿರೇಮಠ ಕಣ್ಣೀರು ಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fourteen =
Remember me
