ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಪಿ ಫಯಾಜ್​ ತಂದೆ ಬಾಬಾ ಸಾಹೇಬ್‌ ಸುಬಾನಿ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಬಾಬಾ ಸಾಹೇಬ್​ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ದಯವಿಟ್ಟು ಯಾರೇ ಆಗಲಿ ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಬೇಡಿ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ. ಆದರೆ ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದಿದ್ದಾರೆ.
ನನ್ನ ಮಗನನ್ನು ಭಾರತೀಯ ಸೇನೆಗೆ ಸೇರಿಬೇಕು ಎಂಬ ಆಸೆ ನನ್ನದಾಗಿತ್ತು. ಆದರೆ ಇಂದು ಆತ ಕ್ಷಮಿಸಲಾರದ ತಪ್ಪು ಮಾಡಿದ್ದಾನೆ. ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಮುಂದೆ ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕೈ ಮಾಡಬಾರದು. ಇವನಿಗೆ ಕೊಡುವ ಶಿಕ್ಷೆಯಿಂದ ಅಂತಹ ಭಯ ಜನರಲ್ಲಿ ಮೂಡಬೇಕು. ಆ ರೀತಿಯ ಶಿಕ್ಷೆಯನ್ನು ನೀಡಲಿ ಎಂದು ಆಗ್ರಹಿಸಿದ್ದಾರೆ.

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 − five =
Remember me
