
ಬೆಂಗಳೂರು:ನೇಕಾರರು ವೈಜ್ಞಾನಿಕ ನೇಕಾರಿಕೆಗೆ ಮುಂದಾದರೆ ಇಲಾಖೆಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.ಬ್ಯಾಂಕ್ವೆಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ 10ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೈಮಗ್ಗಗಳ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಿದ್ದು, ವೈಜ್ಞಾನಿಕ ನೇಕಾರಿಕೆ ಅಳವಡಿಸಿಕೊಳ್ಳದಿದ್ದರೆ ಸುಧಾರಣೆ ಕಷ್ಟ ಎಂದರು.
ಬಾಂಗ್ಲಾ ಬೆಳವಣಿಗೆಯಿಂದ ಬೇಡಿಕೆಬಾಂಗ್ಲಾದ ಬೆಳವಣಿಗೆಗಳು ಅಲ್ಲಿನ ಜವಳಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರಿವೆ. ಇದು ಜವಳಿ ಉತ್ಪನ್ನ ರಫ್ತು ಕ್ಷೇತ್ರದಲ್ಲಿ ಭಾರತಕ್ಕೆ ಉತ್ತಮ ಅವಕಾಶಗಳನ್ನು ಸೃಷ್ಟಿಸಿದೆ. ಈ ಅವಕಾಶ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಲಿದೆ ಎಂದರು.
1000 ಎಕರೆ ಜವಳಿ ಪಾರ್ಕ್ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + nine =
Remember me
