ನೆಲಮಂಗಲ:ಬಲವಂತವಾಗಿ ಪರಸ್ತ್ರೀ ಜತೆಗೆ ಲೈಂಗಿಕ ಕ್ರಿಯೆ ನಡೆಸಲು ಯ್ನತಿಸಿದವನ ಮೇಲೆ ಮಚ್ಚಿನೇಟು ಬಿದ್ದಿದೆ. ಗಾಯಗೊಂಡವನ ಕುಟುಂಬಸ್ಥರು ಆ ಮಹಿಳೆಯ ಕಾಲುಗಳನ್ನು ಕತ್ತರಿಸಿದ್ದಾರೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. 27 ವರ್ಷದ ಮಹಿಳೆ ಎಂಬಾಕೆಯಿಂದ ಅಂಜನಾಮೂರ್ತಿ(35) ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ. ಇದಕ್ಕೆ ಕುಪಿತಗೊಂಡ ಅಂಜನಾಮೂರ್ತಿ ಕುಟುಂಬಸ್ಥರು ಮಹಿಳೆಯ ಕಾಲಿಗೂ ಮಚ್ಚುಬೀಸಿದ್ದಾರೆ.ಇದನ್ನೂ ಓದಿರಿಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ
ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹಿಳೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಲೈಂಗಿಕ ಸಂಪರ್ಕ ಹೊಂದುವಂತೆ ಬಲವಂತ ಮಾಡುತ್ತಿದ್ದ ಅಂಜನಾಮೂರ್ತಿಗೆ ಮಚ್ಚುಬೀಸಿದೆ. ಇದೇ ಕಾರಣಕ್ಕೆ ಆತನ ಮನೆಯವರು ನನ್ನ ಕಾಲುಗಳನ್ನ ಕತ್ತರಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾಳೆ. ಹೆಚ್ಚಿನ ತನಿಖೆ ಬಳಿಕ ಅಲ್ಲಿ ನಡೆದದ್ದಾದರೂ ಏನು ಎಂಬ ಸತ್ಯಾಸತ್ಯತೆ ಹೊರಬರಲಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 14 =
Remember me
