ಬೆಂಗಳೂರು:ರಾಜ್ಯದ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯು ಅಂಕಿತ ಹಾಕಿದ್ದು, ಉನ್ನತ ಶಿಕ್ಷಣದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ನೂತನ ಶಿಕ್ಷಣ ನೀತಿ ರದ್ದು ನಿಶ್ಚಿತವಾಗಿದೆ.
ಇದರಿಂದಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಡಿ ದಾಖಲಾಗಿರುವ ವಿದ್ಯಾರ್ಥಿಗಳು ಮೂರು ವರ್ಷಕ್ಕೆ ಪದವಿ ವ್ಯಾಸಂಗ ಪೂರ್ಣಗೊಳಿಸಿದ ಪ್ರಮಾಣಪತ್ರ ನೀಡಲಿದೆ. ಎನ್‌ಇಪಿ ಪ್ರಕಾರ ಒಟ್ಟು ನಾಲ್ಕು ವರ್ಷಗಳ ಹಾನರ್ಸ್ ಪದವಿ ಮೊಟುಕುಗೊಳ್ಳಲಿದೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ 32 ಸರ್ಕಾರಿ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ, ಶಾಲಾ ಶಿಕ್ಷಣ ಇಲಾಖೆಗಳ ಉನ್ನತಾಧಿಕಾರಿಗಳ ಪ್ರತ್ಯೇಕವಾಗಿ ನಡೆದು, ಸುದೀರ್ಘವಾಗಿ ಚರ್ಚಿಸಿ ಎಸ್‌ಇಪಿ ರಚನೆಗೆ ತೀರ್ಮಾನಿಸಿದೆ.
ಹಳೇ ಶಿಕ್ಷಣ ಪದ್ಧತಿಯನ್ನು ಮುಂದುವರಿಸಿ, ರಾಜ್ಯದ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ವಾರದೊಳಗೆ ಸಮಿತಿ ರಚನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಸಭೆಯಲ್ಲಿ ಪ್ರಕಟಿಸಿದರು.ಶಿಕ್ಷಣ ರಾಜ್ಯಕ್ಕೆ ಸೇರಿದ ವಿಷಯವಾಗಿದೆ. ಕೇಂದ್ರ ಸರ್ಕಾರ ಶಿಕ್ಷಣ ನೀತಿ ರೂಪಿಸಿ ರಾಜ್ಯದ ಮೇಲೆ ಹೇರಲಾಗದು. ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ರೂಪಿಸುವ ಮುನ್ನ ಎಲ್ಲ ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ಆಕ್ಷೇಪಿಸಿದರು.
ವೈವಿಧ್ಯಕತೆ ಏಕತೆಯಿರುವ ಸಂಸ್ಕೃತಿ ನಮ್ಮದು. ಬಹುತ್ವ ಭಾರತದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಈ ಕಾರಣಕ್ಕೆ ಹಳೇ ಶಿಕ್ಷಣ ಪದ್ಧತಿ ಮುಂದುವರಿಸಿ, ಎಸ್‌ಇಪಿ ರೂಪಿಸಲಿದ್ದೇವೆ ಎಂದು ಸಿದ್ದರಾಮಯ್ಯ ಸರ್ಕಾರದ ನಿಲುವು ಸಮರ್ಥಿಸಿಕೊಂಡರು.
ಬಿಜೆಪಿ ಆಡಳಿತವಿರುವ ರಾಜ್ಯಗಳು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿಲ್ಲ. ತಮಿಳುನಾಡು, ಕೇರಳ ರಾಜ್ಯಗಳು ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣಪತ್ರ ನೀಡಲಾಗುತ್ತಿದೆ.
ಒಂದೆರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ನೀಡಲು ಸಾಧ್ಯ. ಉದ್ಯೋಗ ದೊರೆತ ಮೇಲೆ ಬಡವರ ಮಕ್ಕಳು ಮತ್ತೆ ಓದು ಮುಂದುವರಿಸಲು ಅವಕಾಶ ಲಭಿಸುವುದೆ ? ಎಂಬ ಅನುಮಾನ ವ್ಯಕ್ತಪಡಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೆ ಅನ್ವಯವಾಗುತ್ತವೆ. ರಾಜ್ಯ ಸರ್ಕಾರ ಎನ್‌ಇಪಿ ಕೈಬಿಡುವುದರಿಂದ ಅನ್ಯಾಯವಾಗುವುದಿಲ್ಲ. ಎನ್‌ಇಪಿಗೆ ಅಗತ್ಯವಾದ ಸವಲತ್ತುಗಳಿಲ್ಲದೆ ಅನಗತ್ಯ ಗೊಂದಲ ಸೃಷ್ಟಿಯಾಗಿದ್ದು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತಿದೆ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.
ರಾಜ್ಯದಲ್ಲಿ ಇನ್ಮುಂದೆ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ(ಎನ್‌ಇಪಿ) ಇರುವುದಿಲ್ಲ. ರಾಜ್ಯ ಹೊಸ ಶಿಕ್ಷಣ ನೀತಿ(ಎಸ್‌ಇಪಿ) ರೂಪಿಸಲು ವಾರದೊಳಗೆ ವಿಶ್ರಾಂತ ಕುಲಪತಿ, ಶಿಕ್ಷಣ ತಜ್ಞರ ನೇತೃತ್ವದಲ್ಲಿ ಸಮಿತಿ ರಚಿಸಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಗಳ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಮಿತಿ ನೀಡಲಿರುವ ವರದಿ ಆಧರಿಸಿ ರಾಜ್ಯ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರುತ್ತೇವೆ ಎಂದರು.
ಎನ್‌ಇಪಿ ಮೂಲಕ ಯೋಗ, ವೆಲ್‌ನೆಸ್‌ಗೆ ಕ್ರೆಡಿಟ್‌ಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿ, ತನ್ನ ಅಜೆಂಡಾವನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಪ್ರಯತ್ನಿಸಿತ್ತು. ಈ ಕಾರಣಕ್ಕೆ ಎನ್‌ಇಪಿ ತೆಗೆದು ಹಾಕುತ್ತಿದ್ದೇವೆ ಎಂದರು.
ಎನ್‌ಇಪಿಯಡಿ ನಾಲ್ಕು ವರ್ಷಗಳ ಹಾನರ್ಸ್ ಪದವಿ ನೀಡಲಾಗುತ್ತಿದೆ. ಆದರೆ ಮೂರು ವರ್ಷ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ವ್ಯಾಸಂಗ ಪೂರ್ಣಗೊಳಿಸಿದ ಪ್ರಮಾಣಪತ್ರ ನೀಡಲಿದ್ದು, ಇನ್ನೊಂದು ವರ್ಷದ ಹಾನರ್ಸ್ ವ್ಯಾಸಂಗ ಇರುವುದಿಲ್ಲ ಎಂದು ಎಂ.ಸಿ.ಸುಧಾಕರ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + sixteen =
Remember me
