ಬೆಂಗಳೂರು:ಬೀಗ ಹಾಕಿದ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ನೇಪಾಳಿ ಗ್ಯಾಂಗ್‌ನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ಮೋಹನ್ ಬಿಸ್ವಕರ್ಮ ಅಲಿಯಾಸ್ ಮೋಹನ್ ಸಿಂಗ್, ಜನಕ್ ಜೈಶಿ ಅಲಿಯಾಸ್ ಜನಕ್ ಜೋಶಿ, ಬಿಬೇಕ್ ರಾಜ್ ದೇವಕೂಟ, ಸೀತರಾಮ್ ಜೈಸಿ ಮತ್ತು ಕಮಲ ಬಿಕೆ ಅಲಿಯಾಸ್ ಕಮಲ ಸಿಂಗ್ ಬಂಧಿತರು. ಆರೋಪಿಗಳಿಂದ ಚಿನ್ನ, ಬೆಳ್ಳಿ, ಬೈಕ್ ಸೇರಿದಂತೆ 35.80 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ:ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು; ಬಸವರಾಜ ಬೊಮ್ಮಾಯಿ‌ ಕಾರು ತಪಾಸಣೆ
ಮಾ.3ರಂದು ಎಎಂಎಸ್ ಬಡಾವಣೆ ನಿವಾಸಿ ನಂದನ್ ಕುಮಾರ್ ಮನೆ ಬೀಗ ಮುರಿದು 989.58 ಗ್ರಾಂ ಚಿನ್ನಾಭರಣ, 6.5 ಕೆಜಿ ಬೆಳ್ಳಿ ವಸ್ತುಗಳನ್ನು ಕಿಡಿಗೇಡಿಗಳು ದೋಚಿದ್ದರು. ಈ ಬಗ್ಗೆ ತನಿಖೆ ನಡೆಸಿದ ಇನ್‌ಸ್ಪೆಕ್ಟರ್ ವಸಂತ್ ನೇತೃತ್ವದ ತಂಡ, ಮೊಬೈಲ್ ಕರೆಗಳು ಹಾಗೂ ಸಿಸಿ ಕ್ಯಾಮರಾ ದೃಶ್ಯಾವಳಿ ತಾಂತ್ರಿಕ ಮಾಹಿತಿ ಆಧರಿಸಿ ನೇಪಾಳಿ ಗ್ಯಾಂಗ್ ಅನ್ನು ಬಂಧಿಸಿ ನಗರಕ್ಕೆ ಕರೆ ತಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೃತ್ತಿಪರ ಕಳ್ಳರಾದ ಆರೋಪಿಗಳು ಮಹಾರಾಷ್ಟ್ರ ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ. 2017ರಿಂದ ಹಲವು ಬಾರಿ ಮನೆಗಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರ ಬಂದು ಆರೋಪಿಗಳು ದುಷ್ಕೃತ್ಯ ಮುಂದುವರಿಸಿದ್ದರು.
ಇದನ್ನೂ ಓದಿ:ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!ಸುಲಭವಾಗಿ ಹಣ ಸಂಪಾದನೆ ಮಾಡುವ ಉದ್ದೇಶಕ್ಕೆ ನೇಪಾಳಿ ಗ್ಯಾಂಗ್, ಕಳ್ಳತನಕ್ಕೆ ಇಳಿದಿತ್ತು. ಭಾರತದ ಪ್ರಮುಖ ನಗರಗಳಿಗೆ ಬಂದು ಜನ ವಸತಿ ಪ್ರದೇಶದಲ್ಲಿ ಸಂಚಾರ ನಡೆಸಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕನ್ನ ಹಾಕುತ್ತಿದ್ದರು. ಅಂತೆಯೇ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ವಿದ್ಯಾರಣ್ಯಪುರದ ನಂದನ್ ಕುಮಾರ್ ಮನೆಗೆ ಕನ್ನ ಹಾಕಿದ್ದರು.
BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ; ಪಕ್ಷಕ್ಕೆ ಬರಮಾಡಿಕೊಂಡ ಎಚ್​ಡಿಕೆ

ಕೆಲಸದ ನಿಮಿತ್ತ ಕುಟುಂಬದ ಜತೆ ನಂದನ್ ದೊಡ್ಡಬಳ್ಳಾಪುರಕ್ಕೆ ತೆರಳಿದ್ದರು. ಈ ವೇಳೆ ಮನೆಗೆ ಬೀಗ ಮುರಿದು ಆರೋಪಿಗಳು ಚಿನ್ನಾಭರಣ ದೋಚಿದ್ದರು. ಆರೋಪಿಗಳ ಬಂಧನದಿಂದ ಮುಂಬೈನ್ ಚಾರ್‌ಕೋಪ್, ಬೆಂಗಳೂರಿನ ಮಹದೇವಪುರ, ಆರ್.ಟಿ.ನಗರ, ಕೋರಮಂಗಲ, ಯಲಹಂಕ ಉಪ ನಗರ, ವಿದ್ಯಾರಣ್ಯಪುರ ಠಾಣೆಗಳಲ್ಲಿ ನಡೆದಿದ್ದ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − six =
Remember me
