ಬೆಂಗಳೂರು:ರಾಜ್ಯದಲ್ಲಿ ಕಳೆದೊಂದು ವಾರದಿಂದ ಕರೊನಾಗೆ ಕಡಿವಾಣವೇ ಇಲ್ಲದಂತಾಗಿದೆ. ದಿನವೂ 5 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇಂದು ಕೂಡ ಅದೇ ಟ್ರೆಂಡ್​ ಮುಂದುವರಿದಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5,536 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,07,001ಕ್ಕೆ ತಲುಪಿದೆ. ಇದರಲ್ಲಿ ಸಕ್ರಿಯ ಪ್ರಕರಣಗಳು 64,434 ಆಗಿದೆ.
ಇದನ್ನೂ ಓದಿ;ಮುಂಬೈನಲ್ಲಿ ಮಾಯವಾಗುತ್ತಿದೆ ಕರೊನಾ…! ಮೂರು ತಿಂಗಳ ಬಳಿಕ ದಾಖಲೆ ಪ್ರಮಾಣದಲ್ಲಿ ಕುಸಿತ
ಚೇತರಿಸಿಕೊಂಡವರ ಸಂಖ್ಯೆ ಕೂಡ ಹೆಚ್ಚಾಗಿರುವುದು ಕೊಂಚ ಸಮಾಧಾನದ ವಿಷಯ. ಇಂದು ಒಟ್ಟು 2,819 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೆ ಗುಣವಾದವರ ಒಟ್ಟು ಸಂಖ್ಯೆ 40, 404ಕ್ಕೆ ತಲುಪಿದೆ.
ಇನ್ನು, ಕೋವಿಡ್​ನಿಂದ ಸಾವಿಗೀಡಾದವ ಸಂಖ್ಯೆ 2 ಸಾವಿರ ದಾಟಿದ್ದು, ಒಟ್ಟು 2,055 ಜನರು ಮೃತಪಟ್ಟಿದ್ದಾರೆ. ಮತ್ತೊಮ್ಮೆ ಒಂದೇ ದಿನ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿಯೂ 1898 ಹೊಸ ಕರೊನಾ ಪ್ರಕರಣಗಳು ವರದಿಯಾಗಿವೆ. ಒಟ್ಟು ಕೇಸ್​ಗಳು 48,821. ಚೇತರಿಸಿಕೊಂಡವರು 572 ಹಾಗೂ ಮೃತಪಟ್ಟವರ ಸಂಖ್ಯೆ 40 ಆಗಿದ್ದು, ಈವರೆಗಿನ ಒಟ್ಟು ಸಾವು 957 ಕ್ಕೆ ಏರಿದೆ.
ಇದನ್ನೂ ಓದಿ;ಕರೊನಾ ಸಂಕಷ್ಟದಲ್ಲಿ ಭಾರತಕ್ಕೆ ಮತ್ತೊಂದು ಕುಖ್ಯಾತಿ; ಇದು ಕಳವಳಕಾರಿ ವಿದ್ಯಮಾನವೂ ಹೌದು…!
ಇನ್ನೊಂದು ಗಮನಿಸಬೇಕಾದ ವಿಚಾರವೆಂದರೆ ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಇಂದಿನ ಕರೊನಾ ಪೀಡಿತರ ಸಂಖ್ಯೆ ನೂರು ದಾಟಿದೆ.
ಜಿಲ್ಲೆಗಳ ಕೋವಿಡ್​ ಅಂಕಿ-ಅಂಶಗಳು

ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nineteen =
Remember me
