ದೊಡ್ಡಬಳ್ಳಾಪುರ:ಕಳೆದ ಏಳು ತಿಂಗಳ ಹಿಂದಷ್ಟೇ ಮನೆಯವರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದ ಗಂಡ ಹೆಂಡತಿ ಮಧ್ಯೆ ಜಗಳವಾಗಿದ್ದು ಪತ್ನಿ ಹತ್ಯೆ ಯಾಗಿದ್ದಾರೆ.
ಮಂಗಳವಾರ ತಡರಾತ್ರಿ ಮಾತಿಗೆ ಮಾತು ಬೆಳೆದು ಜಗಳ ಅತಿರೇಕಕ್ಕೆ ಹೋಗಿದೆ. ಈ ವೇಳೆ ಪತಿಯೇ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಗರದ ಶ್ರೀನಗರದ ಖಾಸಗಿ ಶಾಲೆ ಬಳಿ ನಡೆದಿದೆ.
ಇದನ್ನೂ ಓದಿ:ನಾಯಿ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಹತ್ಯೆಗೆ ಸಾಥ್ ನೀಡಿದ ಆರೋಪದ ಮೇಲೆ ಪತ್ನಿಯೂ ಅಂದರ್!
ಮೃತ ಮಹಿಳೆಯನ್ನು ತಮಿಳುನಾಡಿನ ಕನ್ಯಾಕುಮಾರಿ ಮೂಲದ ಜನಿಲಾ ಜೋಬಿಯಾ (22ವರ್ಷ) ಎಂದು ಗುರುತಿಸಲಾಗಿದ್ದು, ಏಳು ತಿಂಗಳ ಹಿಂದೆಯಷ್ಟೇ ಶ್ರೀನಗರದ ಸ್ಯಾಮ್ ನೊಂದಿಗೆ ಮದುವೆಯಾಗಿತ್ತು. ಮಂಗಳವಾರ ರಾತ್ರಿ ಗಂಡ-ಹೆಂಡತಿ ನಡುವೆ ನಡೆದ ಜಗಳದಲ್ಲಿ ಪತಿ ಸ್ಯಾಮ್ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸುತ್ತಿದ್ದುದ್ದನ್ನು ಕಂಡು ಸೊಸೆಯ ರಕ್ಷಿಸಲು ತೆರಳಿದ ತಂದೆ-ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಡದಿಯನ್ನು ಹಲ್ಲೆ ನಡೆಸಿದ ಸ್ಯಾಮ್‌ನೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಜನಿಲಾ ಜೋಬಿಯಾ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ, ಡಿವೈಎಸ್ಪಿ ನಾಗರಾಜ್, ಇನ್ಸ್‌ಕ್ಟರ್‌ಗಳಾದ ಪ್ರೀತಂ ಶ್ರೇಯಕರ, ಹರೀಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸ್ಯಾಮ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + twenty =
Remember me
