ಬೆಂಗಳೂರು:ನಾಳೆ ರಾತ್ರಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಆಯೋಜನೆ ಗೊಂಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್​ ಅವರೊಂದಿಗಿನ ಔತಣಕೂಟದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರಳಲಿದ್ದಾರೆ.
ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ದೆಹಲಿಗೆ ಸಿಎಂ ಪ್ರಯಾಣ ಬೆಳಸಲಿದ್ದಾರೆ. ನಾಳೆ ರಾತ್ರಿ 8 ಗಂಟೆಗೆ ನಡೆಯಲಿರುವ ಔತಣಕೂಟದಲ್ಲಿ ಭಾಗಿಯಾಗುವಂತೆ ಆಹ್ವಾನಿಸಲಾಗಿತ್ತು.
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ರಾಷ್ಟ್ರಪತಿ ಭವನದಿಂದ ಆಹ್ವಾನ ಬಂದಿತ್ತು. ನಾಳೆ ರಾತ್ರಿ ಔತಣಕೂಟದಲ್ಲಿ ಭಾಗವಹಿಸಿದ ಬಳಿಕ ದೆಹಲಿಯಲ್ಲೇ ಸಿಎಂ ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ. ಫೆ. 26 ರಂದು ಬೆಂಗಳೂರಿಗೆ ಸಿಎಂ ವಾಪಸಾಗಲಿದ್ದಾರೆ.
ಈ ಮಧ್ಯೆ ನಾಳೆ ನಡೆಯಲಿರುವ ಔತಣಕೂಟದಲ್ಲಿ ಭಾಗವಹಿಸದಿರಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಟ್ರಂಪ್​ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವ ಬಗ್ಗೆ ಅವರಿಗೆ ಬೇಸರವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಸಿಂಗ್​ ಔತಣಕೂಟಕ್ಕೆ ಗೈರಾಗಲಿದ್ದಾರೆ.
ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಮ್​ ನಬಿ ಅಜಾದ್​ ಅವರು ಕೂಡ ರಾಷ್ಟ್ರಪತಿ ಭವನದಲ್ಲಿ ನಾಳೆ ನಡೆಯಲಿರುವ ಔತಣಕೂಟದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಔತಣಕೂಟಕ್ಕೆ ಆಹ್ವಾನ ಇಲ್ಲದಿರುವ ಬಗ್ಗೆ ಆಪ್​ ಪಕ್ಷವೂ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
