ಬೆಂಗಳೂರು:ಮುಜರಾಯಿ ಇಲಾಖೆಗೆ ಹೊಸದಾಗಿ ಧಾರ್ಮಿಕ ಪರಿಷತ್ ರಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡ ಪರಿಷತ್ ರಚಿಸಲಾಗಿದೆ.
ಕಳೆದ ಮೇ 22ರಂದು ಹಿಂದಿನ ಸರ್ಕಾರದಲ್ಲಿ ನೇಮಕಗೊಂಡಿದ್ದ ಧಾರ್ಮಿಕ ಪರಿಷತ್ತಿನ ನಾಮ ನಿರ್ದೇಶಿತರ ಸದಸ್ಯತ್ವವನ್ನು ರದ್ದುಪಡಿಸಲಾಗಿತ್ತು. ಇದೀಗ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಅಧ್ಯಕ್ಷರಾಗಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ಮುಜರಾಯಿ) ಅವರನ್ನು ಉಪಾಧ್ಯಕ್ಷರಾಗಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಪದ ನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಉಳಿದಂತೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎನ್. ಶ್ರೀವತ್ಸ ಕೇದಿಲಾಯ ಅವರು ನ್ಯಾಯಿಕ ಸದಸ್ಯರು, ಡಾ. ಮುರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯರು, ಬಿ.ಎಸ್. ದ್ವಾರಕನಾಥ್, ಡಾ.ಎ. ರಾಧಾಕೃಷ್ಣ ರಾಜು, ಡಾ.ಎ. ರಾಧಾಕೃಷ್ಣರಾಜು, ಕೆ.ಎಂ. ನಾಗರಾಜು, ಡಾ. ಮಹಂತೇಶ ಶಾಸ್ತ್ರಿ, ಮಲ್ಲಿಕಾ ಪ್ರಶಾಂತ ಪಕ್ಕಲಾ, ಚಂದ್ರಶೇಖರ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 18 =
Remember me
