ಬೆಂಗಳೂರು:ಹಲವರ ವಿರೋಧದ ನಡುವೆಯೂ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯ‌ನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವ ಘೋಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟ ಅಧಿಕೃತ‌ ಮುದ್ರೆಯೊತ್ತಿದೆ.
ವಿಜಯನಗರ ನೂತನ ಜಿಲ್ಲೆ ಎಂದು ಘೋಷಿಸಲು ಕಳೆದ ಸಂಪುಟ ಸಭೆಯಲ್ಲಿ ತಾತ್ವಿಕ‌ ಒಪ್ಪಿಗೆ ನೀಡಲಾಗಿತ್ತು. ಇದೀಗ ಶುಕ್ರವಾರ ಬೆಳಗ್ಗೆ ನಡೆದ ಸಂಪುಟ ಸಭೆಯಲ್ಲಿ ಅಧಿಕೃತ‌ ಒಪ್ಪಿಗೆ ಸಿಕ್ಕಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ವಿಜಯನಗರ ನೂತನ ಜಿಲ್ಲೆ ವ್ಯಾಪ್ತಿಗೆ 6 ತಾಲೂಕುಗಳನ್ನು ಸೇರಿಸಿದ್ದೇವೆ. ತಕರಾರು ಪಡೆದು ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ. ಹೊಸ ಜಿಲ್ಲೆಗೆ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ ಎಂದರು.
ಬಳ್ಳಾರಿ, ಕುರುಗೋಡು, ಕಂಪ್ಲಿ, ಸಿರಗುಪ್ಪ, ಸಂಡೂರು ತಾಲೂಕುಗಳು ಬಳ್ಳಾರಿ ಜಿಲ್ಲೆಯಲ್ಲಿ ಉಳಿಯಲಿವೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವಾಗಿರಲಿದೆ. ವಿಜಯನಗರ ಜಿಲ್ಲೆಗೆ ಕಂಪ್ಲಿ ಹಾಗೂ ಕೂಡ್ಲಿಗಿ ಸೇರ್ಪಡೆ ಗೊಂದಲಗಳಿಗೆ ರಾಜ್ಯ ಸಚಿವ ಸಂಪುಟ ತೆರೆ ಎಳೆದಿದ್ದು, ಕೂಡ್ಲಿಗಿ ತಾಲೂಕನ್ನು ವಿಜಯನಗರಕ್ಕೆ ಸೇರ್ಪಡೆ ಮಾಡಿ ಕಂಪ್ಲಿ ತಾಲೂಕನ್ನು ಬಳ್ಳಾರಿಗೆ ಸೇರ್ಪಡೆ ಮಾಡಲಾಗಿದೆ.
ಇದರೊಂದಿಗೆ ಕರ್ನಾಟಕ 31 ಜಿಲ್ಲೆಗಳನ್ನು ಹೊಂದಿದ ರಾಜ್ಯವಾಗಲಿದೆ. ಈ ನಡುವೆ, ಹೊಸ ಜಿಲ್ಲೆ ಸೃಷ್ಟಿಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಸಿಎಂ ವಿರುದ್ಧ ಎಂಟಿಬಿ ನಾಗರಾಜ್​ ಅಸಮಾಧಾನ ಸ್ಫೋಟ!

ಅಯ್ಯೋ, ಅಮ್ಮ ಬೇಗ ಬಾ.. ಹಸುಗಳು ಕೂಗುತ್ತಿವೆ… ಎನ್ನುತ್ತ ಒಳಗೆ ಬಂದ ಮಗನಿಗೆ ಕಾದಿತ್ತು ಶಾಕ್​!

ದುಡ್ಡು ಸಿಗುತ್ತೆ ಅಂತ ಗಂಡನ ಮನೆಗೆ ಓಡೋಡಿ ಬಂದವಳು ಆ ಮನೆಯಲ್ಲೇ ಹೆಣವಾದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
