| ಶ್ರೀಕಾಂತ್ ಶೇಷಾದ್ರಿ ಬೆಂಗಳೂರುಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜಕೀಯ ನಾಯಕರು, ಪಕ್ಷ ಸಂಘಟನೆಯನ್ನು ಎಲೆಕ್ಷನ್ ಮೂಡ್​ಗೆ ಕೊಂಡೊಯ್ಯುತ್ತಿದ್ದಾರೆ. ಸಿದ್ಧತೆಯಲ್ಲಿ ಮುಂದಿರುವ ಕಾಂಗ್ರೆಸ್​ನಲ್ಲಿ ಸ್ಪರ್ಧಾಕಾಂಕ್ಷಿಗಳ ಹುಡುಕಾಟ, ಆ ಕುರಿತ ಚರ್ಚೆ ಜೋರಾಗಿದೆ.
28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕಿಂತ ಹೆಚ್ಚು ಕಡೆ ಸಮರ್ಥರನ್ನು ಹುಡುಕಬೇಕಾದ ಅನಿವಾರ್ಯತೆಯಲ್ಲಿ ಸಿಲುಕಿರುವ ಕಾಂಗ್ರೆಸ್​ಗೆ ಆತ್ಮಸ್ಥೈರ್ಯ ಹುಟ್ಟಿಸಿರುವ ಹೊಸ ಮುಖಗಳು ಈಗಲೇ ಪೈಪೋಟಿಗಿಳಿದಿವೆ. ಪಕ್ಷದಲ್ಲಿ ಕಿರಿಯ ಸ್ಪರ್ಧಾಕಾಂಕ್ಷಿಗಳು ಹಿರಿಯರ ನಿದ್ದೆಗೆಡಿಸುತ್ತಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಕೇತ್​ರಾಜ್ ಮೌರ್ಯ ಹೆಸರು ಕೇಳಿ ಬಂದಿದೆ. ಜತೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಮುರಳೀಧರ ಹಾಲಪ್ಪ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ದಾವಣಗೆರೆ ಕ್ಷೇತ್ರದಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ಕೊಂಡಜ್ಜಿ ಹೆಸರಿದ್ದು, ಕಳೆದ ವಿಧಾಸಭೆ ಚುನಾವಣೆಯಲ್ಲಿ ಕೊನೆಯ ಹಂತದಲ್ಲಿ ಅವಕಾಶ ಕೈತಪ್ಪಿತ್ತು. ಈ ಬಾರಿ ನಿಖಿಲ್ ಜತೆ ಇನ್​ಸೈಟ್ ಐಎಎಸ್ ಅಕಾಡೆಮಿ ನಿರ್ದೇಶಕ ವಿನಯ್ ಕುಮಾರ್ ಹೆಸರು ಕೇಳಿಬರುತ್ತಿದ್ದು, ಸಕ್ರಿಯ ರಾಜಕಾರಣಕ್ಕೆ ಧುಮುಕಲು ವಿನಯ್ಕುಮಾರ್ ಪ್ರಯತ್ನಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೆಸರು ಚರ್ಚೆಯಲ್ಲಿವೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯವರಾದ ಬಿ.ವಿ.ಶ್ರೀನಿವಾಸ್ ಚಿಕ್ಕಬಳ್ಳಾಪುರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದು ವಿಶೇಷ. ಬೆಂಗಳೂರು ಕೇಂದ್ರ ಸಂಸತ್ ಕ್ಷೇತ್ರಕ್ಕೆ ತೆರೆಮರೆಯಲ್ಲಿ ಪಕ್ಷದ ಕೆಲಸ ಮಾಡುತ್ತಿರುವ ಹುಸೇನ್ ಹೆಸರು ಪ್ರಬಲವಾಗಿ ಕೇಳಿಬರುತ್ತಿದ್ದು, ಇವರೊಂದಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ಪೈಪೋಟಿ ನಡೆಸಿದ್ದಾರೆ.
ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕಟ್ಟಿಹಾಕಲು ಕಾಂಗ್ರೆಸ್​ಗೆ ಸಮರ್ಥ ಅಭ್ಯರ್ಥಿ ಕೊರತೆ ಇದೆ ಎಂದು ಕೈ ಹಿರಿಯ ನಾಯಕರೇ ಹೇಳಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೆಸರು ಚಲಾವಣೆಯಲ್ಲಿದ್ದರೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೆಸರು ಚರ್ಚೆಗೆ ಬಂದಿದೆ. ಇವರನ್ನು ಮೀರಿ ಐಶ್ವರ್ಯಾ ಮಹದೇವ್​ಗೆ ಅವಕಾಶ ಸಿಕ್ಕರೂ ಅಚ್ಚರಿ ಏನಿಲ್ಲ ಎಂಬ ವಾತಾವರಣವಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಿದರೆ ಕಣಕ್ಕಿಳಿಸಲು ಸಿದ್ಧರಿದ್ದಾರೆ. ಆದರೆ, 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋತ ಸತೀಶ್ ಜಾರಕಿಹೊಳಿ ಅವರೇ ಪುನಃ ಕಣಕ್ಕಿಳಿಯಬೇಕು, ನಂತರ ಅವರ ಪುತ್ರಿಯನ್ನು ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಮಾಡಿಕೊಳ್ಳಬಹುದೆಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿದೆ. ಈಗಾಗಲೆ ಬೆಂಗಳೂರು ದಕ್ಷಿಣದಲ್ಲಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ಕಣಕ್ಕಿಳಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಇನ್ನು ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಹೈಕಮಾಂಡ್ ಅವಕಾಶ ನೀಡಿದರೆ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲ ತಯಾರಿ ಮಾಡಿಕೊಂಡಿದ್ದೆ, ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಮಾಡಿಕೊಡಲು ತ್ಯಾಗಮಾಡಬೇಕಾಯಿತು.
| ರಜತ್ ಉಳ್ಳಾಗಡ್ಡಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಹೊಸಬರಲ್ಲಿ ಉತ್ಸಾಹ:ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಹೊಸಬರಿಗೆ ಅವಕಾಶ ನೀಡಿತ್ತು. ಈ ಪೈಕಿ 37 ಮಂದಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್​ನಲ್ಲಿರುವ ಹೊಸ ಪೀಳಿಗೆಗೆ ಉತ್ಸಾಹ ತುಂಬಿದೆ. ಅವಕಾಶ ಸಿಕ್ಕರೆ ಲೋಕಸಭಾ ಚುನಾವಣೆಯಲ್ಲಿ ನಾವೇಕೆ ಕಣಕ್ಕಿಳಿಯಬಾರದು ಎಂದು ಪ್ರಯತ್ನ ಆರಂಭಿಸಿದ್ದಾರೆ.
ಆಗಸ್ಟ್ ಅಂತ್ಯದೊಳಗೆ ಪ್ಯಾನಲ್:ಆಗಸ್ಟ್ ಅಂತ್ಯದೊಳಗೆ ಸಂಭಾವ್ಯ ಅಭ್ಯರ್ಥಿಗಳ ಪ್ಯಾನಲ್ ಸಿದ್ಧಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರತಿ ಕ್ಷೇತ್ರದಿಂದ 2-3 ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿ ಹೈಕಮಾಂಡ್​ಗೆ ಕಳಿಸಲಾಗುತ್ತದೆ. ಸರ್ವೆ ಸೇರಿ ವಿವಿಧ ಹಂತದ ಸಮಾಲೋಚನೆ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.
ಗಾದೆಮಾತು ಪ್ರಕರಣ: ರಿಯಲ್ ಸ್ಟಾರ್ ಉಪೇಂದ್ರ ಕಡೆಯಿಂದ ಮಹತ್ವದ ಸೂಚನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 13 =
Remember me
