ಬೆಂಗಳೂರು:ರಾಜ್ಯದಲ್ಲಿ ನೈಟ್​ ಕರ್ಫ್ಯೂ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ಹಾಗೆಂದ ಮಾತ್ರಕ್ಕೆ ಹೊಸ ವರ್ಷದ ಪಾರ್ಟಿಯನ್ನು ಗ್ರ್ಯಾಂಡ್​ ಆಗಿ ಮಾಡೋಣ ಎಂದು ನೀವಂದುಕೊಂಡಿದ್ದರೆ ಎಚ್ಚರ! ಹೊಸ ವರ್ಷದ ದಿನದಂದು ಅಡ್ಡಾದಿಡ್ಡಿ ಓಡಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಕ್ಕೆ ಸರ್ಕಾರ ಸಿದ್ಧವಾಗಿದೆ.
ಇದನ್ನೂ ಓದಿ:ಪ್ರೇಯಸಿಯ ಮಗನನ್ನು ಕೊಂದು ಕೊಳದಲ್ಲಿ ಹೂತಿಟ್ಟ; ಮೃತ ದೇಹಕ್ಕೆ ಮೂರು ದಿನ ಚಿತ್ರಹಿಂಸೆ ನೀಡಿದ!
ಡಿಸೆಂಬರ್​ 31 ಮತ್ತು ಜನವರಿ 1ರಂದು ಬೆಂಗಳೂರಿನಲ್ಲಿ ಖಡಕ್​ ರೂಲ್ಸ್​ ಜಾರಿ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಎರಡು ದಿನ ನಗರದಾದ್ಯಂತ ಖಾಕಿ ಹದ್ದಿನ ಕಣ್ಣಿಡಲಿದೆ. ಇದಕ್ಕೆಂದೇ ಬೆಂಗಳೂರಿಗೆ ಹೊಸ ಗೈಡ್‌ಲೈನ್ಸ್ ಜಾರಿಯಾಗಲಿದೆ. ಸಾರ್ವಜನಿಕ ಸ್ಥಳ, ರಸ್ತೆಗಳಲ್ಲಿ ಸಂಭ್ರಮಾಚರಣೆ ನಿಷೇಧಿಸಿ ಪೊಲೀಸ್ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಜ್ ಸ್ಟ್ರೀಟ್ ರಸ್ತೆಗೆ ಎಂಟ್ರಿ ಇರುವುದಿಲ್ಲ. ಈ ರಸ್ತೆಗಳಲ್ಲಿ ಕಲರ್​ಫುಲ್​ ಲೈಟಿಂಗ್ಸ್​ ಹಾಕುವಂತಿಲ್ಲ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಬಂದ್ ಮಾಡಲಾಗುವುದು. ನಗರಕ್ಕೆ ಎಂಟ್ರಿ ಕೊಡುವ ಎಲ್ಲಾ ರಸ್ತೆಗಳಲ್ಲಿ ನಾಕಾ ಬಂದಿ ಹಾಕಲಾಗುವುದು. ಫ್ಲೈ ಓವರ್ ಗಳು ಕ್ಲೊಸ್ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಸುಖಾ‌ ಸುಮ್ಮನೆ ಕುಡಿದು ರಸ್ತೆಗೆ ಇಳಿಯುವಂತಿಲ್ಲ. ಎಲ್ಲರೂ ಮನೆಯಲ್ಲೇ ಪಾರ್ಟಿ ಮಾಡಿಕೊಳ್ಳಬೇಕು. ಮನೆಯಲ್ಲಿ ಪಾರ್ಟಿ ಮಾಡಿದ್ರು ಸೌಂಡ್ ಮಾಡೊ ಹಾಗಿಲ್ಲ. ಡಿಜೆ ಹಾಕುವಂತಿಲ್ಲ ಎನ್ನುವ ನಿಯಮಗಳು ಜಾರಿಯಾಗಲಿವೆ.
ಇದನ್ನೂ ಓದಿ:ಕಾಂಗ್ರೆಸ್ ನಾಯಕತ್ವ ಎಡಪಂಥೀಯರ ಕೈ ಸೇರಿದೆ – ಪ್ರಿಯಾಂಕಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ಸಿಗ ಮಾಡಿದ್ದೇನು?
ಈ ಎರಡು ದಿನದಂದು ಪೊಲೀಸ್ ಇಲಾಖೆಯಿಂದ ನಗರದಾದ್ಯಂತ ಸೆಕ್ಷನ್​ 144 ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಹಿರಿಯ ಅಧಿಕಾರಿಗಳಿಂದ ಸಭೆ ನಡೆಸಲಾಗಿದೆ. ಪೊಲೀಸ್ ಆಯುಕ್ತ ಕಮಲ್‌ ಪಂತ್ ರಿಂದ ಸಭೆ ನಡೆಸಲಾಗಿದ್ದು, ಶೀಘ್ರವೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.
ಮಗಳ ಪಾಲಿಗೆ ತಂದೆಯೇ ವಿಲನ್: ಡೈರಿಯಲ್ಲಿ ಅಪ್ಪನ ಪೈಶಾಚಿಕ ಕೃತ್ಯದ ಇಂಚಿಂಚೂ ಮಾಹಿತಿ ಬರೆದಿಟ್ಟ ಪುತ್ರಿ!

ತಾಳಿ ಕಟ್ಟುವಷ್ಟರಲ್ಲಿ ಪೊಲೀಸರಿಗೆ ಕರೆ ಮಾಡಿ ಕೈಕೊಟ್ಟ ವಧು: ಚಿಂತಿಸದ ವರನಿಂದ ಒಳ್ಳೆಯ ನಿರ್ಧಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
