ಕೋಟ:ಉಡುಪಿ ಜಿಲ್ಲೆಯ ಕೋಟ ಸಮೀಪದ ಮೂಡುಗಿಳಿ ಯಾರಿನಲ್ಲಿ ನಿರ್ಮಾಣವಾಗಿರುವ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಪ್ರತಿಷ್ಠಾನ ‘ಯೋಗಬನ’ ಫೆ.1ರಂದು ಲೋಕಾರ್ಪಣೆಗೊಳ್ಳಲಿದೆ.
ಕೋಟ ಡಿವೈನ್ ಪಾರ್ಕ್​ನ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಚ್ಚ ಹಸಿರಿನ ವಿಶಾಲ ರಮಣೀಯ ಪರಿಸರದಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ನಿರ್ವಿುಸಲಾಗಿದ್ದು, ಪ್ರಾಚೀನ ದೇಗುಲದ ವಾಸ್ತು ವಿನ್ಯಾಸ ಹೊಂದಿರುವ ಜಗತ್ತಿನ ಪ್ರಥಮ ಯೋಗ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಆಸ್ಪತ್ರೆಯ ಕಟ್ಟಡದ ಮಧ್ಯಭಾಗದಲ್ಲಿ 35 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ವಿುಸಲಾಗಿದೆ. ಇದು ಜಗತ್ತಿನಲ್ಲೇ ಅತೀ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯಾಗಿದ್ದು, ವಿಶೇಷ ಬೆಳಕಿನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಹಸಿರು ಹುಲ್ಲುಹಾಸಿನ ನಡುವೆ ಯೋಗ ಆಸ್ಪತ್ರೆ ನಿರ್ವಣಗೊಂಡಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಪ್ರತಿಷ್ಠಾನವನ್ನು ಉದ್ಘಾಟಿಸಲಿದ್ದಾರೆ. ವಿವೇಕಾನಂದರ ಪ್ರತಿಮೆಯನ್ನು ಸ್ವಾಮಿ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಕುಲಪತಿಗಳಾದ ಎಚ್.ಆರ್. ನಾಗೇಂದ್ರ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವಿವೇಕ್ ಉಡುಪ ತಿಳಿಸಿದ್ದಾರೆ.
ಕನ್ಯಾಕುಮಾರಿ ಮಾದರಿ ಪ್ರತಿಮೆ: ಆಸ್ಪತ್ರೆ ನಡುವೆ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಪ್ರತಿಮೆಯಂತೆ ತದ್ರೂಪಿ ಪುತ್ಥಳಿ ನಿರ್ಮಾಣ ಮಾಡಿರುವುದು ವಿಶೇಷ. ಶಿಲ್ಪಿ ಬೆಂಗಳೂರಿನ ಶ್ರೀಧರಮೂರ್ತಿ ಮತ್ತು ತಂಡ ಪ್ರತಿಮೆಯನ್ನು ನಿರ್ವಿುಸಿದೆ. ಪ್ರಾಕೃತಿಕ ವಿಕೋಪಗಳಿಂದ ರಕ್ಷಿಸಲು ಮೂರ್ತಿಗೆ ಲೋಹದ ಲೇಪನ ಮಾಡಲಾಗಿದೆ.
ಇಂದಿನ ಕಾಲಘಟ್ಟದಲ್ಲಿ ನಾವು ತಿನ್ನುವ ಆಹಾರದಿಂದ ಹಿಡಿದು ಪ್ರತಿಯೊಂದು ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆ ಕಂಡಿದ್ದೇವೆ. ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ನಮಗೆ ಅರಿವು ಇರುವುದಿಲ್ಲ. ಇದನ್ನೆಲ್ಲ ಮನಗಂಡು ಗ್ರಾಮೀಣ ಶುಭ್ರ ಪರಿಸರದಲ್ಲಿ ಸುಸಜ್ಜಿತ ಸರ್ವಕ್ಷೇಮ ಆಸ್ಪತ್ರೆ ಸಂಶೋಧನಾ ಪ್ರತಿಷ್ಠಾನ ರಚನೆ ಮಾಡಿದ್ದೇವೆ.
|ಡಾ.ವಿವೇಕ ಉಡುಪ ವೈದ್ಯಕೀಯ ನಿರ್ದೇಶಕ, ಸರ್ವಕ್ಷೇಮ ಆಸ್ಪತ್ರೆ ಸಂಶೋಧನಾ ಕೇಂದ್ರ ಮೂಡುಗಿಳಿಯಾರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
