ಬೆಂಗಳೂರು:ರಾಜ್ಯ ಮುಜರಾಯಿ ಇಲಾಖೆಯಡಿ ಹೊಸದಾಗಿ 88 ಹಾಗೂ ಅವಧಿ ಮುಕ್ತಾಯಗೊಂಡ 15 ಸೇರಿ ಒಟ್ಟು 103 ‘ಎ’ ವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಸೆಕ್ಷನ್ 25ರನ್ವಯ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆಲವು ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಸಲ್ಲಿಕೆಯಾಗಿದ್ದ ಮನವಿಗಳ ಕುರಿತು ಇತ್ತೀಚೆಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚಿಸಿ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನ 18 ಹಾಗೂ ವಿವಿಧ ಜಿಲ್ಲೆಯ 88 ದೇವಾಲಯಗಳಿಗೆ ಹೊಸದಾಗಿ ಮತ್ತು ಅವಧಿ ಮುಕ್ತಾಯಗೊಂಡಿರುವ ಉಡುಪಿಯ 3 ಹಾಗೂ ದಕ್ಷಿಣ ಕನ್ನಡದ 11 ದೇವಾಲಯಗಳಿಗೆ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 25 ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಸದಸ್ಯತ್ವ ಕೋರಿ ನಿಗದಿತ ಅರ್ಜಿ ಭರ್ತಿ ಮಾಡಿ (ನಮೂನೆ-1 (ಬಿ) (22ನೇ ನಿಯಮ) ರಲ್ಲಿ) ನ.27ರೊಳಗೆ ಸಲ್ಲಿಸಬೇಕು. ಆಯುಕ್ತರು, ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018 ಈ ವಿಳಾಸಕ್ಕೆ ನೇರವಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅರ್ಜಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಡಿಡಿಡಿ.ಜಿಠಿಞ.ಚ್ಟ.ಜಟ.ಜ್ಞಿ ನಲ್ಲಿ ದೊರೆಯುತ್ತದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 2 =
Remember me
