ಬೆಂಗಳೂರು:ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ವೈದ್ಯರು ಹಾಗೂ ಆರೋಗ್ಯಾಧಿಕಾರಿಗಳ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸುವ ಮೂಲಕ ಸರ್ಕಾರ ಹೊಸ ವರ್ಷಕ್ಕೆ ವೈದ್ಯರಿಗೆ ಬಂಪರ್ ಕೊಡುಗೆ ನೀಡಿದೆ.
ಕೋವಿಡ್ ಸಂದರ್ಭದಲ್ಲಿ ವೈದ್ಯರು ನೀಡುತ್ತಿರುವ ಸೇವೆ ಪರಿಗಣಿಸಿ, ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಪೋ›ತ್ಸಾಹಿಸುವ ನಿಟ್ಟಿನಲ್ಲಿ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆ.1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.
ಈ ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. ಕರ್ನಾಟಕ ವೈದ್ಯಾಧಿಕಾರಿಗಳ ಸಂಘ ಸಿಜಿಎಚ್​ಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಸರ್ಕಾರವನ್ನು ಕೋರಿತ್ತು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಶೇಷ ಭತ್ಯೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
