ಬೆಂಗಳೂರು:ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಟೈಟ್​ ರೂಲ್ಸ್​ ಜಾರಿ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಸಿಎಂ ಬಿ.ಎಸ್​.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬ್ರಿಟನ್ ಕರೊನಾ ವೈರಸ್ ಆತಂಕದ ಹಿನ್ನೆಲೆ ಇಂದು(ಗುರುವಾರ) ಮಧ್ಯಾಹ್ನ 12ರಿಂದ ನಾಳೆ(ಶುಕ್ರವಾರ) ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದಿರುವ ಸಿಎಂ, ಹೊಸ ವರ್ಷ ಎಲ್ಲರಿಗೂ ನೆಮ್ಮದಿ ಮತ್ತು ಶಾಂತಿ ತರಲಿ ಎಂದು ಶುಭ ಹಾರೈಸಿದ್ದಾರೆ.ಇದನ್ನೂ ಓದಿರಿಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್​ವೈ, ಕರೊನಾ ನಡುವೆಯೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆ. 1.95 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಪ್ರಸ್ತಾಪ ಬಂದಿದೆ. ಒಂದು ವರ್ಷದೊಳಗೆ ಬೆಂಗಳೂರು ಚಿತ್ರಣವನ್ನೇ ಬದಲಿಸುವೆ. ಇದಕ್ಕಾಗಿ ಹಣ ಬಿಡುಗಡೆ ಮಾಡುತ್ತೇನೆ ಎಂದರು.
2022ರ ಆದಾಯ ದ್ವಿಗುಣಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ರೂಪಿಸಿದ್ದಾರೆ. ರೈತರ ಶ್ರೇಯೋಭಿವೃದ್ಧಿಗೆ ತಿದ್ದುಪಡಿ ತಂದು ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಬೇಕೆಂಬ ಬೇಡಿಕೆಗೆ ಮನ್ನಣೆ ಕೊಟ್ಟು ನೂತನ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಮೋದಿಯವರನ್ನು ಟೀಕೆ ಮಾಡಬಹುದೇ ಹೊರತು, ಅವರ ಕಾರ್ಯಕ್ರಮ ಟೀಕಿಸಲು ಸಾಧ್ಯವಿಲ್ಲ. ಕಿಸಾನ್ ಸಮ್ಮಾನ್, ಮಾಸಿಕ ಪಿಂಚಣಿ, ಉಜ್ವಲ ಯೋಜನೆ ಯಶಸ್ಸು ನಮ್ಮ‌ ಮುಂದಿದೆ. ಧರಣಿ ನಿರತರು ದೂರದೃಷ್ಟಿ ಅರ್ಥಿಸಿಕೊಂಡು ಮಾತುಕತೆ ಮೂಲಕ ಮುಂದೆ ಬರಬೇಕೆಂದು ವಿನಂತಿಸಿದರು.
ಬಿಜೆಪಿ ಪಕ್ಷವು ರಾಜ್ಯ ಹಾಗೂ ರಾಷ್ಟ್ರದಲ್ಲಿ ದಿನೇದಿನೆ ಬಲಗೊಳ್ಳುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ.60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದಕ್ಕೆ ಕಾರಣ ಸಾಮೂಹಿಕ ನಾಯಕತ್ವ. ಉಸ್ತುವಾರಿ ಸಚಿವರು, ಶಾಸಕರು, ಕಾರ್ಯಕರ್ತರ ಪರಿಶ್ರಮ. 5785 ಗ್ರಾಪಂ ಪೈಕಿ 3800 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದು ದೊಡ್ಡ ಸಾಧನೆ ಎಂದು ಸಿಎಂ ಬಿಎಸ್​ವೈ ಸಂತಸ ವ್ಯಕ್ತಪಡಿಸಿದರು.
ಉಪ ಚುನಾವಣೆಯಲ್ಲಿ ಹನ್ನೆರಡರಲ್ಲಿ ಬಿಜೆಪಿ ಜಯಗಳಿಸಿದೆ. ಶಿರಾ, ರಾಜರಾಜೇಶ್ವರಿಯಲ್ಲೂ ಜಯಗಳಿಸಿದೆ. ಈ ಹಿಂದೆ ಜಯಗಳಿಸದೆ ಇದ್ದ ಕಡೆಯೂ ಜಯ ಸಾಧಿಸುವ ಮೂಲಕ ಬಿಜೆಪಿ ಸಾಮರ್ಥ್ಯ ನಿರೂಪಿಸಲಾಗಿದೆ ಎಂದರು.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಗ್ರಾಪಂ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್​​ಗೆ ಶುರುವಾಯ್ತು ಟೆನ್ಷನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
