ಹೊಸೂರು:ದಾದಿಯರ ಎಡವಟ್ಟಿಗೆ ನವಜಾತು ಶಿಶುವಿನ ಕೈ ಮುರಿದ ಘಟನೆ ಕೃಷ್ಣಗಿರಿ ಜಿಲ್ಲೆ ಉದ್ದನಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಏನಿದು ಪ್ರಕರಣ?: ಹೊಸೂರು ನಗರದ ಕೊತ್ತೂರಿನ ಕೂಲಿಕಾರ್ಮಿಕ ಶಿವಕುಮಾರ್​ ಎಂಬುವರ ಪತ್ನಿ ವಸಂತ ಅವರಿಗೆ ಬುಧವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಹತ್ತಿರದ ಉದ್ಧನಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆ ವೈದ್ಯೆ ಗೈರಾಗಿದ್ದರು. ಆಗ ದಾದಿಯರೇ ಹೆರಿಗೆ ಮಾಡಿಸಿದ್ದರು. ಈ ವೇಳೆ ಕೈ ಮುರಿದಿದ್ದು, ಮಗುವಿನ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ತಕ್ಷಣ ಆಂಬುಲೆನ್ಸ್​ ಮೂಲಕ ಹೊಸೂರು ಸರ್ಕಾರಿ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ.
ಆಸ್ಪತ್ರೆಗೆ ಬಳಿ ಗಲಾಟೆ:ಗಂಡು ಮಗು ಜನಿಸಿದ ಸಂಭ್ರಮದಲ್ಲಿದ್ದ ಸಂಬಂಧಿಗಳಿಗೆ ಮಗುವಿನ ಕೈ ಮುರಿದಿರುವ ಸುದ್ದಿ ಕೇಳಿ ಆಘಾತವಾಗಿದೆ. ಪ್ರಸವದ ವೇಳೆ ವೈದ್ಯರಿಲ್ಲದ ಕಾರಣ ದಾದಿಯರೇ ಹೆರಿಗೆ ಮಾಡಿಸಿದರು. ಆದರೆ ಅವರಿಗೆ ಅನುಭವ ಕೊರತೆಯಿಂದ ಎಡವಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು, ಆಸ್ಪತ್ರೆ ಆವರಣದಲ್ಲಿ ಗಲಾಟೆ ಮಾಡಿದರು. ಪರಿಸ್ಥಿತಿ ಪ್ರಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಮಾಧಾನಗೊಳಿಸಿದರು. ಮಗು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಪಾಲಕರು ಹೊಸೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೋಗರೆದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ… ರಾತ್ರಿಯಿಡೀ ನೋವಿಂದ ನರಳಿದ ಗರ್ಭಿಣಿ ದುರಂತ ಸಾವು! ಜನಿಸಿದ ಅವಳಿ ಮಕ್ಕಳೂ ಬದುಕಲಿಲ್ಲ

ವಿಧಾನಸಭೆ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್​! ಅರ್ಜಿ ಜತೆಗೆ ಶುಲ್ಕವನ್ನೂ ಪಾವತಿಸಬೇಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
