ಚಿಕ್ಕಮಗಳೂರು:ರಾಜ್ಯಾದ್ಯಂತ ಬಹುತೇಕ ಎಲ್ಲರೂ ಯುಗಾದಿಯ ಸಂಭ್ರಮದಲ್ಲಿ ಮುಳುಗಿದ್ದರೆ, ಇಲ್ಲೊಂದು ಕಡೆ ಹಬ್ಬದಂದೇ ಮನೆಗೆ ಸಾವಿನ ಸೂತಕ ಆವರಿಸಿದೆ. ನವವಿವಾಹಿತೆಯೊಬ್ಬಳು ಯುಗಾದಿ ದಿನವಾದ ಇಂದು ಸಾವಿಗೀಡಾಗಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದ ಗಾನವಿ (27) ಸಾವಿಗೀಡಾದ ಯುವತಿ. ಎನ್.ಆರ್. ಪುರ ತಾಲೂಕಿನ ಬನ್ನೂರು ಗ್ರಾಮದ ಗಾನವಿ ಕಳೆದ ವರ್ಷವಷ್ಟೇ ನಂದಿತ್​ನನ್ನು ಮದುವೆಯಾಗಿದ್ದರು.
ಇಂದು ಪತಿಯ ಮನೆಯಲ್ಲಿ ಸಂಭವಿಸಿದ ಗಾನವಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ನಂದಿತ್, ಅತ್ತೆ ಸಾವಿತ್ರಮ್ಮ, ಮಾವ ಚಂದ್ರೇಗೌಡ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪ ಹೊರಿಸಲಾಗಿದೆ. ಗಾನವಿಗೆ ವಿಷ ಕುಡಿಸಿ ಕೊಲೆ ಮಾಡಿದ್ದಾರೆ ಎಂದು ಆಕೆಯ ಮನೆಯವರು ಆರೋಪಿಸಿದ್ದಾರೆ.
ಗಾನವಿ ತಂದೆ ಲೋಕಪ್ಪ ಗೌಡ ಇತ್ತೀಚೆಗಷ್ಟೇ ಅಳಿಯನ ಕಡೆಯವರಿಗೆ 2 ಲಕ್ಷ ರೂ. ಕೊಟ್ಟಿದ್ದರು ಎನ್ನಲಾಗಿದೆ. ಅದಾಗ್ಯೂ ಅಲ್ಲಿ ಗಾನವಿ ಮೇಲೆ ಹಲ್ಲೆ ನಡೆದಿದ್ದು, ಅದನ್ನು ಆಕೆ ರೆಕಾರ್ಡ್ ಮಾಡಿಟ್ಟುಕೊಂಡಿದ್ದು, ಈಗ ವಿಷ ಕುಡಿಸಿ ಸಾಯಿಸಿದ್ದಾರೆ ಎಂದು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಅಂಬಾನಿಯನ್ನು ಹಿಂದಿಕ್ಕಿದ ಅದಾನಿ; ಗೌತಮ್ ಈಗ ಏಷ್ಯಾದ ಅತಿ ಶ್ರೀಮಂತ..

ಹರ್ಷ ಹತ್ಯೆ ಪ್ರಕರಣ; ಎನ್​ಐಎ ಎಫ್​ಐಆರ್​ನಲ್ಲಿ ಆತಂಕಕಾರಿ ವಿಷಯ ಬಹಿರಂಗ!

ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 3 =
Remember me
