ಬೆಂಗಳೂರು:ಕಳೆದ ವರ್ಷ ಬೆಂಗಳೂರಿನ ಸುಮಾರು 30 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದವು. ಇದೀಗ ಮತ್ತದೆ ಘಟನೆ ಮರುಕಳಿಸಿದೆ. ಹೌದು, ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಂದು ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಈ ಬಾರಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ ಸೇರಿದಂತೆ ಹಲವಾರು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು.
ಈ ಹಿನ್ನೆಲೆಯಲ್ಲಿ ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಆಗಮಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯ ಬಳಿ ಓಡಿ ಬಂದಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಬಾಂಬ್ ಬೆದರಿಕೆ ಕುರಿತು ಮಾಹಿತಿ ನೀಡಿದ್ದು, ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಆಗ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ. ಮಕ್ಕಳು, ಪೋಷಕರು ಭಯ, ಆತಂಕಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, “ಟಿವಿಯಲ್ಲಿ ನೋಡಿ ಹತ್ತಿರದ ಶಾಲೆಗೆ ಆಗಮಿಸಿದೆ. ಪೊಲೀಸರು ಬಂದಿರುವ ಬೆದರಿಕೆ ಇ-ಮೇಲ್ ತೋರಿಸಿದರು. ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಇದು ಹುಸಿ ಬೆದರಿಕೆ ಎಂದು ಅನಿಸುತ್ತಿದೆ” ಎಂದರು.

ವ್ಯಾಪಾರ ಕ್ಷೇತ್ರದಲ್ಲಿ ದೆಹಲಿ, ಮುಂಬೈಯನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಭಾರತದ ಸಿಲಿಕಾನ್ ವ್ಯಾಲಿ ‘ಬೆಂಗಳೂರು’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − one =
Remember me
