ವಿಲಾಸ ಮೇಲಗಿರಿಬೆಂಗಳೂರು: ಕರೊನಾ ಸೋಂಕು ಹೆಚ್ಚಾಗುತ್ತಿದ್ದು, ದಿನಕ್ಕೆ ಒಬ್ಬರು -ಇಬ್ಬರಂತೆ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಪೀಡಿತರಾಗುತ್ತಿದ್ದಾರೆ. ಇದೇ ವೇಳೆ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸ ಮಾಡಬಹುದಾದ ನೀತಿ ಜಾರಿಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಕರ್ತವ್ಯ ನಿರತ ಅಧಿಕಾರಿಗಳು ಹಾಗೂ ನೌಕರರು ಮೇಲಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹಾಜರಾಗುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನೌಕರರ ಸುರಕ್ಷತೆ ದೃಷ್ಟಿಯಿಂದ ಸೀಲ್​ಡೌನ್ ಮತ್ತು ಕಂಟೇನ್ಮೆಂಟ್ ಪ್ರದೇಶದ ಅಧಿಕಾರಿಗಳು ಹಾಗೂ ನೌಕರರಿಗೆ ವರ್ಕ್ ಫ್ರಂ ಹೋಂ ಜಾರಿ ಮಾಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸರ್ಕಾರಿ ನೌಕರರ ಸಂಘ ಕೂಡ ಇದೇ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿದೆ. ಕರೊನಾ ಹಾವಳಿ ತಗ್ಗುವವರೆಗೂ ಶೇ.50 ಸಿಬ್ಬಂದಿ ಬಳಸಿ ಕೆಲಸ ಮಾಡುವುದು, ಉಳಿದ ಶೇ.50 ಮನೆಯಿಂದ ಕೆಲಸ ನಿರ್ವಹಿಸುವಂತೆ ಮಾಡಬೇಕೆಂಬ ಅಭಿಪ್ರಾಯವೂ ಇದೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ (ಎಂಎಸ್ ಬಿಲ್ಡಿಂಗ್) ಸೇರಿ ಅನೇಕ ಕಚೇರಿಗಳಲ್ಲಿ ನೌಕರರಿಗೆ ಈಗಾಗಲೆ ಸೋಂಕು ಕಾಣಿಸಿಕೊಂಡಿದ್ದು ಸೀಲ್​ಡೌನ್ ಮಾಡಲಾಗಿದೆ. ಇಲ್ಲಿರುವ ಕಚೇರಿಗಳಿಗೆ ಪ್ರತಿದಿನ ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಯಾರಿಗೆ ಸೋಂಕು ಹಬ್ಬಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಆದ್ದರಿಂದ ಮನೆಯಿಂದಲೇ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಆರೋಗ್ಯದ ನೆಪವೊಡ್ಡಿ ಈಗಾಗಲೆ ಕೆಲವರು ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದಿದ್ದಾರೆ. ಇನ್ನು ಕೆಲ ನೌಕರರು ಒತ್ತಾಯಕ್ಕೆಂಬಂತೆ ಕಚೇರಿಗೆ ಬರುತ್ತಿದ್ದಾರೆ. ಈಗ ಸೋಂಕು ಉಲ್ಬಣಗೊಳ್ಳುತ್ತಿದ್ದು, ನೌಕರರಿಗೆ ಕೆಲಸಕ್ಕಿಂತ ಜೀವ ಮುಖ್ಯವಾಗಿದೆ. ಪ್ರತಿದಿನ ಹೀಗೆ ಜೀವ ಭಯದಲ್ಲಿ ಕೆಲಸ ಮಾಡುವ ಬದಲು ಮನೆಯಿಂದಲೇ ಕೆಲಸ ಮಾಡುತ್ತೇವೆ ಎಂದು ನೌಕರರು ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಯ ಹುಳುಕು ತೋರಿಸಿದ್ದೇ ಪ್ರಾಣ ಕಸಿಯಿತೆ? ಪತ್ರಕರ್ತನ ಸಾವಿಗೆ ಟ್ವಿಸ್ಟ್‌
ಶೇ.50 ಸಿಬ್ಬಂದಿಯೊಂದಿಗೆ ಕಾರ್ಯ:ಬೆಂಗಳೂರು ಸಚಿವಾಲಯದಲ್ಲಿ ಕರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಶೇ.50 ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಣೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಸಚಿವಾಲಯ ನೌಕರರ ಸಂಘ ಶೇ.33 ಸಿಬ್ಬಂದಿ ಒಳಗೊಂಡು ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಲ್ಲಿ ಒತ್ತಾಯ ಮಾಡಿತ್ತು. ಆದರೆ ನೌಕರರ ಬೇಡಿಕೆಯನ್ನು ಪರಿಗಣಿಸಿ ಶೇ.50 ಸಿಬ್ಬಂದಿ ಕಾರ್ಯ ನಿರ್ವಹಣೆಗೆ ಅನುಮತಿ ನೀಡಲು ಕಡತ ಈಗ ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಸಿಬ್ಬಂದಿ ಕಡಿಮೆ ಇದ್ದರೆ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಒಂದೆರಡು ದಿನಗಳಲ್ಲಿ ಸಿಎಂ ಒಪ್ಪಿಗೆ ನೀಡಲಿದ್ದಾರೆಂದು ಹೇಳಲಾಗಿದೆ. ಸಚಿವಾಲಯದ ಎಲ್ಲ ಸಿಬ್ಬಂದಿಗೆ ಕರೊನಾ ಟೆಸ್ಟ್ ಮಾಡಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ತಿಳಿಸಿದ್ದಾರೆ.
ನಾನು ಕಿತ್ತೂರು ರಾಣಿಯ ವಂಶಸ್ಥೆ: ಕುಕ್ಕರ್ ನೆನಪಿಸಿದ ಜಾರಕಿಹೊಳಿಗೆ ಹೆಬ್ಬಾಳ್ಕರ್ ಎಚ್ಚರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + one =
Remember me
