ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ಜಯಲಕ್ಷ್ಮೀ ಕುಮಾರಸ್ವಾಮಿ ಲೇಔಟ್ಛಲ, ಏಕಾಗ್ರತೆ, ಗುರಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ಕುಮಾರಸ್ವಾಮಿ ಲೇಔಟ್​ನ ಪತ್ರಿಕಾ ವಿತರಕಿ ಜಯಲಕ್ಷ್ಮೀ ಅವರೇ ಸಾಕ್ಷಿ. 25 ವರ್ಷಗಳಿಂದ ಪತಿ ಕಂಚಿಗಯ್ಯ ನಡೆಸಿಕೊಂಡು ಬರುತ್ತಿದ್ದ ಪತ್ರಿಕೆ ವಿತರಣೆಯನ್ನೇ ಅವರ ಪತ್ನಿ ಜಯಲಕ್ಷ್ಮೀ ಮುಂದುವರಿಸಿದ್ದಾರೆ. ಕುಮಾರಸ್ವಾಮಿ ಲೇಔಟ್, ಪದ್ಮನಾಭನಗರ ಕೇಂದ್ರಗಳಿಂದ 60ಕ್ಕೂ ಅಧಿಕ ಹಂಚಿಕೆದಾರರನ್ನು ಹೊಂದಿರುವ ಇವರು, ಈ ವೃತ್ತಿಯ ಆದಾಯದಿಂದಲೇ ಸ್ವಂತ ಮನೆ ನಿರ್ವಿುಸಿ ಕುಟುಂಬದ ಜತೆ ಸಂತೋಷದಿಂದ ಕಾಲಕಳೆಯುತ್ತಿದ್ದಾರೆ. ಮಗಳು ಎಂಬಿಎ ಮುಗಿಸಿ ಉಪನ್ಯಾಸಕಿಯಾಗಿದ್ದರೆ, ಮಗ ಇಂಜಿನಿಯರಿಂಗ್ ಓದಿದ್ದಾನೆ. ಯಾರೇ ಆಗಲಿ ಕಷ್ಟ ಪಟ್ಟು, ಶ್ರದ್ಧಾಭಕ್ತಿಯಿಂದ ಕೆಲಸವನ್ನು ಪ್ರೀತಿಸಿದಲ್ಲಿ ಪ್ರತಿಫಲ ಖಂಡಿತ ಸಿಗುತ್ತದೆ ಎನ್ನುತ್ತಾರೆ ಜಯಲಕ್ಷ್ಮೀ.
ಪತ್ರಿಕೆ ವಿತರಿಸಿ ಮನೆ ಕಟ್ಟಿಸಿಕೊಂಡ್ರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
