ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ಮಹಾದೇವಪ್ಪ ರಾಯಚೂರುರಾಯಚೂರು ನಗರದಲ್ಲಿ ಹತ್ತಾರು ಬಡಾವಣೆಯಲ್ಲಿ ಮನೆ ಮನೆಗೆ ಪತ್ರಿಕೆ ತಲುಪಿಸುತ್ತಿರುವ ಮಹಾದೇವಪ್ಪ ಬಹುತೇಕರಿಗೆ ಚಿರಪರಿಚಿತ. 44 ವರ್ಷಗಳಿಂದ ಪತ್ರಿಕೆ ವಿತರಣೆಯಲ್ಲಿಯೇ ಸಾರ್ಥಕತೆ ಕಂಡಿರುವ ಇವರು, ಎರಡ್ಮೂರು ದಶಕಗಳ ಹಿಂದೆ ರಾಜ್ಯ ಮಟ್ಟದ ಪತ್ರಿಕೆಗಳು ಮಧ್ಯಾಹ್ನ ಬಂದು ತಲುಪಿದಾಗಲೂ ಅವುಗಳನ್ನು ಕಚೇರಿ ಮತ್ತು ಮನೆಗಳಿಗೆ ಮುಟ್ಟಿಸುವ ಕೆಲಸ ಮಾಡುವ ಮೂಲಕ ಕುಟುಂಬದ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಸೇರಿ ಎಲ್ಲವನ್ನೂ ನಿಭಾಯಿಸಿಕೊಂಡು ಬಂದಿದ್ದಾರೆ. ಮಕ್ಕಳು ಉತ್ತಮ ಉದ್ಯೋಗದಲ್ಲಿದ್ದು, ದುಡಿಯಲು ಆರಂಭಿಸಿದರೂ ಪತ್ರಿಕೆ ವಿತರಣೆ ಕಾರ್ಯವನ್ನು ನಿಲ್ಲಿಸದ ಮಹಾದೇವಪ್ಪ 63 ವರ್ಷದ ಇಳಿ ವಯಸ್ಸಿನಲ್ಲಿಯೂ ಬೆಳ್ಳಂಬೆಳಗ್ಗೆ ಸೈಕಲ್ ಹತ್ತಿ ಮನೆ ಮನೆಗೆ ಪತ್ರಿಕೆ ಹಾಕುವುದನ್ನು ನಿಲ್ಲಿಸಿಲ್ಲ.
ತೆರಿಗೆ ಕಟ್ಟುವ ಮಟ್ಟಕ್ಕೆ ಬೆಳೆಸಿದ ವಿಜಯವಾಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − twelve =
Remember me
