ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ರಘುನಾಥ ರಾವ್ ಶಹಾಪುರಎಂಬತ್ತರ ದಶಕದಿಂದಲೇ ದಿನಪತ್ರಿಕೆ ವಿತರಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಶಹಾಪುರದ ರಘುನಾಥ ರಾವ್ ತಿಳಗುಳ. ಆಗಿನ್ನೂ ದಿನಪತ್ರಿಕೆಗಳನ್ನು ಮುದ್ರಣವಾದ ತಕ್ಷಣ ತಲುಪಿಸಲು ಸಮರ್ಪಕ ಸಾರಿಗೆ ವ್ಯವಸ್ಥೆ ಇರಲಿಲ್ಲ. ಆದರೆ ಛಲ ಬಿಡದೆ ಇದೇ ವೃತ್ತಿಯಲ್ಲಿ ಯುವಕರ ಕೈಗಳಿಗೆ ಪಾರ್ಟ್​ಟೈಮ್ ಕೆಲಸ ನೀಡಿ ಹಸಿವು ನೀಗಿಸಿದ್ದಾರೆ ತಿಳಗುಳ. ಇವರಲ್ಲಿ ವಿತರಕರಾಗಿ ಕೆಲಸ ಮಾಡಿದ್ದ ಅನೇಕರು ವೈದ್ಯರಾಗಿದ್ದಾರೆ. ಕೆಲವರು ಪೊಲೀಸ್ ಇಲಾಖೆಯಲ್ಲಿ, ಇನ್ನು ಕೆಲವರು ಸೈನ್ಯದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ‘ಪತ್ರಿಕಾ ವಿತರಣೆ ನನ್ನ ಪಾಲಿಗೆ ಪವಿತ್ರ. ಈಗಲೂ ನಮ್ಮ ಕುಟುಂಬದ ಎಲ್ಲರೂ ಪತ್ರಿಕಾ ವಿತರಣೆ ಕಾಯಕದಲ್ಲೇ ತೊಡಗಿದ್ದೇವೆ’ ಎನ್ನುತ್ತಾರೆ ರಾವ್.
37 ವರ್ಷಗಳಿಂದ ನಿತ್ಯ ಕೆಲಸ ಪತ್ರಿಕಾ ವಿತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − six =
Remember me
