ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ಎಸ್.ನಾಗೇಂದ್ರ ವಿಜಯನಗರರಾಮನಗರ ಜಿಲ್ಲೆ ಕನಕಪುರ ಸಾತನೂರಿನ ಎಸ್. ನಾಗೇಂದ್ರ 25 ವರ್ಷಗಳಿಂದ ಬೆಂಗಳೂರಿನ ವಿಜಯನಗರ ಕೇಂದ್ರದಲ್ಲಿ ಪತ್ರಿಕಾ ವಿತರಕರಾಗಿದ್ದು, ‘ಇದೇ ನನ್ನ ಜೀವನ, ಇದೇ ನನ್ನ ಸರ್ವಸ್ವ’ ಎಂದು ನಂಬಿದ್ದಾರೆ. 18ನೇ ವಯಸ್ಸಿಗೆ ಈ ವೃತ್ತಿಯಲ್ಲಿ ತೊಡಗಿಸಿಕೊಂಡ ನಾಗೇಂದ್ರ, ‘ಇದರಲ್ಲೇ ಇಷ್ಟು ದಿನ ಕೆಲಸ ಮಾಡಿದ್ದೇವೆ. ಯಾರು ಏನೇ ಹೇಳಲಿ, ಪತ್ರಿಕೆ ವಿತರಕನಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂತೋಷವಿದೆ’ ಎನ್ನುತ್ತಾರೆ. 52ನೇ ವಯಸ್ಸಲ್ಲೂ ಚಟುವಟಿಕೆಯಿಂದ ಕಾರ್ಯನಿರ್ವಹಿಸುವ ಇವರು, ಪತ್ರಿಕಾ ವಲಯದಲ್ಲಿ ಗುರುತಿಸಿ ಕೊಂಡಿದ್ದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಿದೆ ಎಂಬ ಸಂತೋಷ ವ್ಯಕ್ತಪಡಿಸಿದ್ದಾರೆ. ಕರೊನಾ ವೇಳೆ ಕೆಲವರು ಪ್ರತಿ ಬೇಡ ಎಂದಿದ್ದರು, ಈಗ ಮತ್ತೆ ಕೇಳುತ್ತಿದ್ದಾರೆ. ಒಟ್ಟು 92 ಹಂಚಿಕೆದಾರರು ಇದ್ದಾರೆ, ಮೊದಲು ಸೈಕಲ್ ನಿಂದ ಆರಂಭವಾದ ಈ ವೃತ್ತಿ ಇದೀಗ ಟಿವಿಎಸ್ ವಾಹನದ ಮೂಲಕ ನಡೆಯುತ್ತಿದೆ ಎನ್ನುತ್ತಾರೆ ನಾಗೇಂದ್ರ.
ವಿಜಯ ಸಾಧಿಸಿದ ಜಯಲಕ್ಷ್ಮೀ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
