ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ಉತ್ತಂಗಿ ಕೊಟ್ರೇಶ ಕೊಟ್ಟೂರುಬಳ್ಳಾರಿ ಜಿಲ್ಲೆ ಕೊಟ್ಟೂರಿನ ಉತ್ತಂಗಿ ಕೊಟ್ರೇಶ 37 ವರ್ಷಗಳಿಂದ ಪತ್ರಿಕಾ ವಿತರಕ-ಏಜೆಂಟರಾಗಿದ್ದು, ಅದರಲ್ಲೇ ಇವರ ಕುಟುಂಬದ ಜೀವನ ನಿರ್ವಹಣೆ ಸಾಗಿದೆ. 1983ರಲ್ಲಿ 60 ರೂ. ವೇತನ ಮೂಲಕ ವಿತರಕರಾಗಿ ಕೆಲಸ ಆರಂಭಿಸಿದರು. ಇದೀಗ ಇವರ ಬಳಿ 10 ವಿತರಕರಿದ್ದಾರೆ. ಸ್ಪಿನ್ನಿಂಗ್ ಮಿಲ್​ನ ಕೆಲಸದ ಜತೆಗೆ ಪತ್ರಿಕೆ ವಿತರಣೆ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಹತ್ತು ವರ್ಷಗಳ ಹಿಂದೆ ಮಿಲ್ ಮುಚ್ಚಿದ ಬಳಿಕ ಪತ್ರಿಕೆಗಳ ಏಜೆನ್ಸಿಯೇ ಜೀವನಾಧಾರವಾಗಿದೆ. 57 ವರ್ಷ ವಯಸ್ಸಿನ ಕೊಟ್ರೇಶ ಅವರ ಜತೆ ಹತ್ತು ಜನ ವಿತರಕರು ಕೆಲಸ ಮಾಡುತ್ತಿದ್ದರೂ ಯಾರಾದರೂ ಪೇಪರ್ ತಲುಪಿಲ್ಲ ಎಂದು ಕರೆ ಮಾಡಿದರೆ ಸ್ವತಃ ಹೋಗಿ ಕೊಟ್ಟು ಬರುತ್ತಾರೆ. ಕೇವಲ 10 ಪತ್ರಿಕೆಗಳ ಮೂಲಕ ಏಜೆನ್ಸಿ ಆರಂಭಿಸಿದ ಕೊಟ್ರೇಶ ಇದೀಗ ವಿಜಯವಾಣಿಯದ್ದೇ 680 ಪತ್ರಿಕೆಗಳನ್ನು ವಿತರಿಸುತ್ತಾರೆ.
ಜೀವನ ರೂಪಿಸಿದ ಕಾಯಕ ಪತ್ರಿಕಾ ವಿತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
