ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ವಾಸುದೇವ ಢಗೆ ಹುಬ್ಬಳ್ಳಿವಯಸ್ಸು 65 ವರ್ಷವಾದರೂ ಓದುಗರಿಗೆ ಪತ್ರಿಕೆ ತಲುಪಿಸುವ ಕೆಲಸ ಮಾತ್ರ ಬಿಟ್ಟಿಲ್ಲ. ಇವರಿಗೆ ಹೆಚ್ಚು ಓದಲು ಸಾಧ್ಯವಾಗಲಿಲ್ಲವಾದರೂ 16ನೇ ವರ್ಷಕ್ಕೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸುವ ಕಾಯಕ ಆಯ್ದುಕೊಂಡು ಜನರನ್ನು ಓದಿಗೆ ಹಚ್ಚುವುದರಲ್ಲೇ ಸಂತೃಪ್ತಿ ಕಂಡರು. ಇವರೇ ಹುಬ್ಬಳ್ಳಿ ರಾಮನಗರದ ನಿವಾಸಿ ವಾಸುದೇವ ವಿಷ್ಣುರಾವ್ ಢಗೆ. ಆರಂಭದಲ್ಲಿ ಸಹೋದರರು ಸೇರಿ 400 ಪತ್ರಿಕೆಯೊಂದಿಗೆ ಶುರು ಮಾಡಿದ ಈ ವೃತ್ತಿ ಈಗಲೂ ಮುಂದುವರಿಸಿದ್ದಾರೆ. ಪತ್ನಿ ಸರ್ಕಾರಿ ಶಾಲೆ ಶಿಕ್ಷಕಿ. ಇಬ್ಬರು ಪುತ್ರರು, ಓರ್ವ ಪುತ್ರಿಯರಿಗೆ ಇಂಜಿನಿಯರಿಂಗ್ ಓದಿಸಿದ್ದಾರೆ. ಅವರೀಗ ಉನ್ನತ ಸ್ಥಾನಕ್ಕೂ ಏರಿದ್ದಾರೆ. ಇಡೀ ಕುಟುಂಬ ಆರ್ಥಿಕವಾಗಿಯೂ ಸಾಕಷ್ಟು ಸುಧಾರಿಸಿದೆ. ಆದರೂ, ಅನ್ನ ನೀಡಿದ ಪತ್ರಿಕೆ ವಿತರಣೆ ಮೇಲಿನ ಅಭಿಮಾನ ಹಾಗೇ ಇದೆ. ಐದು ದಶಕಗಳಿಂದ ಪತ್ರಿಕೆ ವಿತರಣೆ ನಿಯತ್ತಿನಿಂದ ಮಾಡುತ್ತಿದ್ದೇನೆ. ಪತ್ರಿಕೆ ನನಗೆ ಅನ್ನ ನೀಡಿದ ದೇವರು. ಹಾಗಾಗಿ ಈಗಲೂ ಪತ್ರಿಕೆಯೊಂದಿಗೇ ನನ್ನ ದಿನಚರಿ ಆರಂಭವಾಗುತ್ತದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ ವಾಸುದೇವ ಢಗೆ.
ದಂಪತಿ ಜತೆ ಪುತ್ರಿಯೂ ಭಾಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 5 =
Remember me
