ಬೆಂಗಳೂರು:ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚನೆ ಮಾಡಬೇಕು ಎಂಬುದು ನಮ್ಮ ಉದ್ದೇಶ. ಬಸವರಾಜ ಬೊಮ್ಮಾಯಿ ಸಿಎಂ ಆಗಿ ಸರ್ಕಾರ ಮುನ್ನಡೆ ಸುತ್ತಿದ್ದಾರೆ. ಕಟೀಲ್ ಪಕ್ಷದ ನೇತೃತ್ವ ವಹಿಸಿದ್ದಾರೆ. ಆದ್ದರಿಂದ ಕಟೀಲ್ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರನ್ನು ತೆಗೆದು, ಈಶ್ವರಪ್ಪ ಹಾಗೂ ಶೆಟ್ಟರ್ ಹೊರಗಿಟ್ಟು ಸರ್ಕಾರ ರಚನೆ ಮಾಡುವುದಾಗಿ ಕಟೀಲ್ ಹೇಳಿದ್ದರೆಂಬ ಆಡಿಯೋವೊಂದು ಇತ್ತೀಚಿಗೆ ಬಹಿರಂಗಗೊಂಡು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದೀಗ ಈಶ್ವರಪ್ಪ ಅವರು ಕಟೀಲ್ ವಿರುದ್ಧ ಇಂತಹ ಬಾಂಬ್ ಹಾಕಿದ್ದಾರೆ ಎಂದೇ ಹೇಳಲಾಗುತ್ತಿದೆ.
ಡಿಸಿಎಂ ಜನರ ಬಯಕೆ:ನಾನು ಡಿಸಿಎಂ ಆಗಬೇಕೆಂಬುದು ಜನರ ಬಯಕೆ. ಸಾವಿರಾರು ಮಂದಿ ಕರೆ ಮಾಡಿ ತಮಗೆ ಹೇಳುತ್ತಿದ್ದಾರೆ. ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು. ಬಿಜೆಪಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸಹಕಾರ ನೀಡಿರುವಷ್ಟು ಬೇರೆ ಪಕ್ಷಗಳು ನೀಡಿಲ್ಲ. ಕೇಂದ್ರ ಸಂಪುಟದಲ್ಲಿ 45 ಮಂತ್ರಿಗಳಿದ್ದಾರೆ. ಮೆಡಿಕಲ್​ನಲ್ಲಿ ಶೇ.27 ಮೀಸಲಾತಿ ನೀಡಿದೆ ಎಂದರು.
ಕಲ್ಲಡ್ಕ – ಈಶ್ವರಪ್ಪ ಚರ್ಚೆ:ಸಂಘ ಪರಿವಾರದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಶನಿವಾರ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಹೊಸ ಸರ್ಕಾರ ರಚನೆ, ಪಕ್ಷದ ಸಂಘಟನೆ.. ಹೀಗೆ ಅನೇಕ ವಿಷಯಗಳ ಬಗ್ಗೆ ಸಮಾಲೋಚನೆ ಮಾಡಿದರು. ಇದೊಂದು ಸೌಜನ್ಯದ ಭೇಟಿ ಎಂದು ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ನೂ ಎರಡು ವಾರ ನೈಟ್​ ಕರ್ಫ್ಯೂ; ಕರೊನಾ ಆತಂಕ ಹೆಚ್ಚಳ, ಮತ್ತಷ್ಟು ಕಟ್ಟುನಿಟ್ಟು…

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − sixteen =
Remember me
