ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್)ವು ಕೇಂದ್ರ ಇಂಧನ ಸಚಿವಾಲಯದ ಪ್ರತಿಷ್ಠಿತ ರಾಷ್ಟ್ರೀಯ ಇಂಧನ ಸಂರಕ್ಷಣಾ 2023ರ ಪ್ರಶಸ್ತಿಗೆ ಪಡೆದಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್ ಹರ್ಷ ವ್ಯಕ್ತಪಡಿಸಿದ್ದಾರೆ.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕಪಾತ್ರವಹಿಸುತ್ತದೆ. ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ.
ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನಹರಿಸಲಾಗುವುದು.ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಪ್ರಶಸ್ತಿ ಬಂದಿರುವುದರ ಹಿಂದೆ ಹಲವು ಅಧಿಕಾರಿಗಳ ಶ್ರಮವಿದೆ ಎಂದು ಕೆ.ಜೆ.ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂಧನ ಸಂರಕ್ಷಣೆ ಕಾಯ್ದೆ ಪ್ರಕಾರ ರಾಜ್ಯವು ಮುಂದಿನ ಐದು ವರ್ಷಗಳಲ್ಲಿ 744 ದಶಲಕ್ಷ ಯೂನಿಟ್ ಇಂಧನ ಉಳಿತಾಯದ ಗುರಿ ಹೊಂದಿದ್ದು, ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತು ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ.
ಇಂಧನ ಸಂರಕ್ಷಣಾ ಕಾಯ್ದೆ-2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ಶ್ರಮಿಸಲಾಗುವುದು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.
ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಪ್ರತಿಕ್ರಿಯಿಸಿ, ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಸಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ.
ಕಾಯ್ದೆ ಪ್ರಕಾರ ಸುಸ್ಥಿರ ಅಭಿವೃದ್ಧಿ ಜತೆಗೆ ಐದು ವರ್ಷಗಳಲ್ಲಿ ಐದು ಪ್ರಮುಖ ವಲಯಗಳಲ್ಲಿ 744 ದಶಲಕ್ಷ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.
ಕರ್ನಾಟಕವು ಸತತ ಮೂರು ವರ್ಷಗಳಿಂದ ಇಂಧನ ದಕ್ಷತೆ ಮತ್ತು ಸಂರಕ್ಷಣೆಯಲ್ಲಿ ಮುಂದಿದೆ. 2023ರಲ್ಲಿ 85.75 ಅತ್ಯಧಿಕ ಅಂಕಗಳ ಮೂಲಕ ಮೊದಲ ರ‌್ಯಾಂಕ್ ಗಳಿಸಿ, ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯವೆಂಬ ಸ್ಥಾನ ಪಡೆದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − seven =
Remember me
