ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವೇರುತ್ತಿದೆ. ಮಂಡ್ಯ ಕ್ಷೇತ್ರ ಬಿಸಿ ಬಿಸಿ ಚರ್ಚೆಯಲ್ಲಿದೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಸೀಟು ಹಂಚಿಕೆಗೆ ತುದಿಗಾಲಲ್ಲಿ ಕಾಯುತ್ತಿದೆ.
ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಲಿದ್ದು, ಭಾನುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಅಮಿತ್ ಶಾ ಭೇಟಿ ಮಾಡಿ ಮಂಡ್ಯ ಟಿಕೆಟ್ ಹಾಗೂ ಇತರೆ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅಮಿತ್ ಶಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಬಿಜೆಪಿ ಮೈಸೂರು ಕ್ಲಸ್ಟರ್ ಸಭೆ ನಡೆಸಲಿರುವುದರಿಂದ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಬಿಜೆಪಿ ನಾಯಕರ ಜತೆ ಮಾತ್ರ ಚರ್ಚಿಸಲಿರುವುದರಿಂದ ಕುಮಾರಸ್ವಾಮಿ ಮೈಸೂರಿನಲ್ಲಿ ಭೇಟಿಯಾಗುವ ಬದಲು ದೆಹಲಿಯಲ್ಲಿ ಭೇಟಿ ಮಾಡಿ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + four =
Remember me
