ಬೆಂಗಳೂರು:ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಆ.11ರಂದು ನಡೆದ ಗಲಭೆ ಪ್ರಕರಣದ ಹೆಚ್ಚಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಹಿಸಿಕೊಂಡಿದೆ.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಹದೋರಳಿಯ ನವೀನ್ ೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದ ವಿವಾದಾತ್ಮಕ ೆಸ್ಟ್ ಅನ್ನೇ ಟಾರ್ಗೆಟ್ ಮಾಡಿಕೊಂಡು ಗಲಭೆ ಎಬ್ಬಿಸಿದ್ದರು. ಪೊಲೀಸರು ನಡೆಸಿದ ಗೋಲಿಬಾರ್‌ನಿಂದ ಮೂವರು ಗಲಭೆಕೋರರು ಮೃತಪಟ್ಟಿದ್ದರು.
ಶಾಸಕರ ಮನೆ, ದೇವರಜೀವನಹಳ್ಳಿ ಠಾಣೆ ಮತ್ತು ಸಾರ್ವಜನಿಕರ ಮನೆಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು. ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. ಬೆಂಗಳೂರು ಸಿಸಿಬಿ ಪೊಲೀಸರ ತನಿಖೆ ವೇಳೆ ಎನ್‌ಡಿಪಿಐ ಮತ್ತು ಪಿಎ್ಐ ಕಾರ್ಯಕರ್ತರ ಕೈವಾಡ ಇರುವುದು ಬೆಳಕಿಗೆ ಬಂದಿತ್ತು. ಅಲ್ಲದೆ, 360ಕ್ಕೂ ಅಧಿಕ ಗಲಭೆಕೋರರನ್ನು ಬಂಧಿಸಲಾಗಿತ್ತು. ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣೆಯಲ್ಲಿ ಎ್ಐಆರ್ ದಾಖಲಾಗಿದ್ದವು.
ಅಲ್ಲದೆ, ಸಾರ್ವಜನಿಕ ಆಸ್ತಿ ನಷ್ಟ ಉಂಟು ಮಾಡಿದ ಗಲಭೆಕೋರರಿಂದ ಆಸ್ತಿ ಜಪ್ತಿ ಮಾಡಲು ಸಹ ಸರ್ಕಾರ ಮುಂದಾಗಿದೆ. ಸಿಸಿಬಿ, ಪೂರ್ವ ವಲಯ ಪೊಲೀಸ್ ಮತ್ತು ಬೆಂಗಳೂರು ಜಿಲ್ಲಾ ನ್ಯಾಯಾಧೀಶರ ತನಿಖೆ ನಡೆಯುತ್ತಿದೆ. ಜತೆಗೆ ಎನ್‌ಐಎ ತನಿಖೆ ಕೈಗೊಂಡಿರುವುದು ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 20 =
Remember me
