ಮಂಗಳೂರು:ಸ್ಥಳೀಯ ಪೊಲೀಸ್​ ಅಧಿಕಾರಿಗಳ ನೆರವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ದಾಳಿ ಮಾಡಿದೆ.
ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆಗಳಲ್ಲಿ ಎನ್​ಐಎ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನೂ ಓದಿ:2 ಗ್ಯಾರಂಟಿ ಬೇಷರತ್ ಜಾರಿ; ಎಲ್ರಿಗೂ 200 ಯುನಿಟ್ ಕರೆಂಟ್, ಸ್ತ್ರೀಯರಿಗೆ ಉಚಿತ ಬಸ್ ಟಿಕೆಟ್
2022ರ ಜುಲೈ ತಿಂಗಳಲ್ಲಿ ಬಿಹಾರ ರಾಜಧಾನಿ ಪಟನಾದ ಫುಲ್ವಾರಿ ಶರೀಫ್​ ಏರಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿತ್ತು. ಬಳಿಕ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಎನ್​ಐಎ ತಂಡ ಬಂದಿತ್ತು.
ಇತ್ತೀಚೆಗೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿಯೂ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಲದ ಸರ್ಫರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಹಾಗೂ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬುವರನ್ನು ಬಂಧಿಸಲಾಗಿತ್ತು. ದಾಳಿ ವೇಳೆ ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂ. ವಹಿವಾಟು ನಡೆಸಿದ್ದು ಪತ್ತೆಯಾಗಿತ್ತು.
ಇದನ್ನೂ ಓದಿ:ಮತ್ತೆ ಸುದ್ದಿಯಲ್ಲಿ ಪವಿತ್ರಾ ಲೋಕೇಶ್; ಹೊಸ ಪ್ರಯತ್ನವಾದರೂ ಏನು?
ಕೋಟ್ಯಂತರ ಹಣದ ವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣದ ಜಾಲವನ್ನು ಎನ್​ಐಎ ಬೆನ್ನತ್ತಿದೆ. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ಜಾಲ ಪತ್ತೆಯಾಗಿದ್ದು, ತನಿಖೆ ಚುರುಕುಗೊಂಡಿದೆ. ಅದರ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಾಳಿಯಾಗಿದೆ.(ದಿಗ್ವಿಜಯ ನ್ಯೂಸ್​)
ಸ್ವಾವಲಂಬನೆಯತ್ತ ಹೆಜ್ಜೆ: ರಕ್ಷಣಾ ರಫ್ತು 9 ವರ್ಷಗಳಲ್ಲಿ 23 ಪಟ್ಟು ಹೆಚ್ಚಳ

2 ಗ್ಯಾರಂಟಿ ಬೇಷರತ್ ಜಾರಿ; ಎಲ್ರಿಗೂ 200 ಯುನಿಟ್ ಕರೆಂಟ್, ಸ್ತ್ರೀಯರಿಗೆ ಉಚಿತ ಬಸ್ ಟಿಕೆಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + fourteen =
Remember me
