ಬೆಂಗಳೂರು:ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬುಧವಾರ ಮಧ್ಯಾಹ್ನ FIR ದಾಖಲಿಸಿದ್ದು, ಇಂದಿನಿಂದ ಅಧಿಕೃತವಾಗಿ ಸ್ಪೋಟದ ಸಂಪೂರ್ಣ ತನಿಖೆಯನ್ನು NIA ಆರಂಭಿಸಲಿದೆ.
ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಒಂದನ್ನು ಹೊರಡಿಸಿದ್ದಾರೆ.
NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential.pic.twitter.com/F4kYophJFt
ಇದನ್ನೂ ಓದಿ:ಟೀಮ್​ ಇಂಡಿಯಾ ಮಾಜಿ ಕೋಚ್​ ಮನೆಯಲ್ಲಿ 1 ಕೋಟಿ ರೂ. ನಗದು ಪತ್ತೆ
ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು NIA ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಕಫೆಯ ಮುಂಭಾಗದಲ್ಲಿಯೇ ಬಸ್‌ ನಿಲ್ದಾಣವಿದ್ದು, ಕೆಫೆಯವರೆಗೆ ಶಂಕಿತ ವ್ಯಕ್ತಿ ನಡೆದು ಬಂದ ದಾರಿಯನ್ನು ತನಿಖೆ ಮಾಡಿದೆ. ಘಟನೆ ನಡೆದ ಬಳಿಕ ಈತ ತಮಿಳುನಾಡು ಅಥವಾ ಕೆರಳ ರಾಜ್ಯಕ್ಕೆ ಹೋಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಈ ರಾಜ್ಯಗಳಲ್ಲೂ ಕೂಡ ಎನ್‌ಐಎ ಕಾರ್ಯಾಚರಣೆ ಆರಂಭಿಸಿದೆ. ಪ್ರಕರಣದಲ್ಲಿ ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:six − one =
Remember me
