ಬೆಂಗಳೂರು:ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (ನೈಸ್) ಹಗರಣದ ದಾಖಲೆ ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ. ಪ್ರಧಾನಿ ಮೋದಿಯವರಿಗೆ ದಾಖಲೆ ಕೊಡುತ್ತೇನೆ ರೈತರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದೀರಿ. ಆ ಎಲ್ಲ ದಾಖಲೆ ಸಂಗ್ರಹ ಮಾಡುತ್ತಿದ್ದೇನೆ. ಅಕ್ರಮಗಳ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಪ್ರಧಾನಿ, ಗೃಹ ಸಚಿವರ ಭೇಟಿಯ ನಂತರ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯ ಮಾಡುತ್ತೇನೆ. ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಎಲ್ಲ ಮಾಹಿತಿ ಬಿಚ್ಚಿಡುವ ಪ್ರಯತ್ನ ಮಾಡಿದೆ. ಅದಕ್ಕೆ ಅವಕಾಶ ಸಿಗಲಿಲ್ಲ. ರಾಜ್ಯದ ಹಿತ ಮತ್ತು ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ನೇರವಾಗಿ ಪ್ರಧಾನಿ ಅವರನ್ನೇ ಭೇಟಿ ಆಗಲಿದ್ದೇನೆ. ಒಂದೆರಡು ದಿನದಲ್ಲಿ ಪ್ರಧಾನಿಗಳು ಹಾಗೂ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೋರಲಾಗುವುದು ಎಂದು ಹೇಳಿದರು.
ಪೆನ್ ಕೊಡಿ ಎಂದವರಿಂದಲೇ ಅಕ್ರಮ:ಈ ಸರ್ಕಾರದಲ್ಲಿರುವ ಅತ್ಯಂತ ಪ್ರಭಾವಿಯೊಬ್ಬರು ಫೆರಿಫಿರಲ್ ರಿಂಗ್ ರೋಡ್ ಮಾಡಲು ನೈಸ್ ಜತೆ ಸೇರಿಕೊಂಡು ಏನೆಲ್ಲ ಕರ್ಮಕಾಂಡ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಣ್ಣಪುಟ್ಟ ಮನೆಗಳನ್ನು ಕಟ್ಟಿಕೊಂಡಿದ್ದ ಬಡವರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ. ಆ ಮಹಾನುಭಾವರು ನನಗೂ ಒಮ್ಮೆ ಪೆನ್ ಹಿಡಿಯುವ ಅವಕಾಶ ಕೊಡಿ ಎಂದು ಕೇಳಿದ್ದು ಇದಕ್ಕೇನಾ? ಎಂದು ಯಾರೊಬ್ಬರ ಹೆಸರು ಹೇಳದೆಯೇ ಟೀಕಾಪ್ರಹಾರ ನಡೆಸಿದರು.
ಬ್ರ್ಯಾಂಡ್ ಬೆಂಗಳೂರು ಬಜನೆ:ನೈಸ್ ಯೋಜನೆಯಲ್ಲಿ ಅಕ್ರಮಗಳ ಸರಣಿಯೇ ನಡೆದಿದೆ. ಯೋಜನೆಗೆ ಸ್ವಾಧೀನಕ್ಕೆ ಗುರುತಿಸಲಾಗಿದ್ದ, ಪ್ರಾಥಮಿಕ ಅಧಿಸೂಚನೆ ಮಾಡಲಾಗಿದ್ದ ಭೂಮಿಯನ್ನೇ ಖರೀದಿ ಮಾಡಿದ್ದ ಆ ಮಹಾನುಭಾವರಿಗೆ ಇದೆಲ್ಲವನ್ನೂ ಜೀರ್ಣ ಮಾಡುವ ತಾಕತ್ತು ಇದೆ. ಅಧಿಸೂಚನೆ ಆಗಿದ್ದ ಬಡ ರೈತರ ಭೂಮಿಯನ್ನೇ ಸ್ವಾಹಾ ಮಾಡಿದವರು ಇಂದು ಬ್ರ್ಯಾಂಡ್ ಬೆಂಗಳೂರು ಭಜನೆ ಮಾಡುತ್ತಿದ್ದಾರೆ. ಎಲ್ಲಿ ಯಾರ ಭೂಮಿ ಹಿಡಿದುಕೊಳ್ಳೋಣ ಎಂದು ಹೊಂಚು ಹಾಕುವವರಿಂದ ಬೆಂಗಳೂರು ಉದ್ಧಾರ ಸಾಧ್ಯವೇ? ಎಂದು ಪ್ರಶ್ನಿಸಿದರು.
ಕನ್ನಡಿಗರಿಗೆ ಏನಾಗಿದೆ?:ದೊಡ್ಡ ಪ್ರಮಾಣದಲ್ಲಿ ಜನರ ಭೂಮಿಯನ್ನು ಕೊಳ್ಳೆ ಹೊಡೆಯುತ್ತಿದ್ದರೂ ಕನ್ನಡಿಗರು ಮೌನವಾಗಿದ್ದಾರೆ. ಇಲ್ಲಿ ಏನಾಗಿದೆ ಎನ್ನುವುದು ನನಗೆ ಅರ್ಥ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಕಾನೂನು ಸಚಿವರ ಜವಾಬ್ದಾರಿ ಏನು:ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೆ ಕಾನೂನು ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪ ಮಾಡಿದ್ದಕ್ಕೆ ಅವರಿಗೆ ಜೀವ ಬೆದರಿಕೆ ಹಾಕಿದ್ದರು. ಈ ಬೆದರಿಕೆ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆಯೂ ತನಿಖೆ ಆಗಬೇಕು. ಇಷ್ಟೆಲ್ಲ ನಡೆಯುತ್ತಿದ್ದರೂ ಈಗಿನ ಕಾನೂನು ಸಚಿವರು ಏನು ಮಾಡುತ್ತಿದ್ದಾರೆ ಎಂದು ಕೇಳಿದರು.ಹಿಂದೆ ಬಳ್ಳಾರಿಯ ಜಿಂದಾಲ್ ಗೆ ಭೂಮಿ ಕೊಡಬಾರದು ಎಂದು ಎಚ್.ಕೆ.ಪಾಟೀಲ ಅವರೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈಗ ಅವರೇ ಸಚಿವರು. ಈಗೇನು ಮಾಡುತ್ತಿದ್ದಾರೆ? ಇಷ್ಟು ದೊಡ್ಡ ಪ್ರಮಾಣದ ಜನರ ಭೂಮಿಯನ್ನು ಉಳಿಸಿಕೊಳ್ಳಲು ಏನು ಮಾಡಿದ್ದೀರಿ? ಕಾನೂನು ಸಚಿವರಾಗಿ ನಿಮ್ಮ ಜವಾಬ್ದಾರಿ ಏನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.—————————-
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 4 =
Remember me
