ಬೆಂಗಳೂರು: ನೈಸ್ ಅಕ್ರಮಗಳ ದಾಖಲೆ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಇದರಲ್ಲಿ ಸಂಶಯ ಇಲ್ಲ. ಈ ಯೋಜನೆ ಹೆಸರಲ್ಲಿ ಏನೇನು ಆಗಿದೆ? ಎಷ್ಟೆಲ್ಲ ಅಕ್ರಮ ನಡೆದಿದೆ? ಯಾರೆಲ್ಲಾ ಫಲಾನುಭವಿಗಳು ಇದ್ದಾರೆ? ಎಲ್ಲವನ್ನೂ ಜನರ ಮುಂದೆ ಇಡುತ್ತೇನೆ. ಕೆಲವರ ಹಣೆಬರಹ ಆಚೆಗೆ ಬರುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ದಾಖಲೆ ಬಿಡುಗಡೆ ಸಮಸ್ಯೆ ಇದೆ. ಬುಧವಾರ ಚಂದ್ರಯಾನ -3 ರೋವರ್ ಚಂದ್ರನ ಮೇಲೆ ಇಳಿಯಲಿದೆ. ಎಲ್ಲರಂತೆ ನನಗೂ ಕುತೂಹಲ ಇದೆ. ಪ್ರತಿಯೊಬ್ಬರ ಗಮನವೂ ಆ ಕಡೆಯೇ ಇರುತ್ತದೆ. ಹೀಗಾಗಿ ಕೆಲ ದಿನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು ಅವರು.ಕೆಲವರು ನೈಸ್ ಯೋಜನೆ ದೇವೇಗೌಡರ ಪಾಪದ ಕೂಸು ಎಂದು ಹೇಳಿದ್ದಾರೆ. ಅವರಿಗೆ ಗೊತ್ತಿರಲಿ, ಯೋಜನೆಯ ಮೂಲ ಒಪ್ಪಂದ ಎನಿದೆ? ಅದನ್ನು ಅವರು ಓದಿಕೊಳ್ಳಬೇಕು. ಅದನ್ನು ಪೂರ್ಣವಾಗಿ ತಿಳಿದು ಮಾತನಾಡಿದರೆ ಚೆನ್ನಾಗಿರುತ್ತದೆ ಎಂದರು.
ದೇವೇಗೌಡರು ಒಪ್ಪಂದ ಮಾಡಿಕೊಂಡಿದ್ದು ರಸ್ತೆ ಮಾಡಲಿ ಎಂದು, ಬೆಂಗಳೂರು ಮತ್ತು ಮೈಸೂರು ನಡುವೆ ಓಡಾಡುವ ಜನರಿಗೆ ಒಳ್ಳೆಯದಾಗಲಿ ಎಂದು. ಈ ಮಹಾನುಭಾವರು ಮಾಡಿದ್ದೇನು? ಮೂಲ ಒಪ್ಪಂದವನ್ನು ಹೇಗೆಲ್ಲ ತಿರುಚಿದರು, ಇವರ ಮಹಾನ್ ಸಾಧನೆಗಳನ್ನೆಲ್ಲ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ನಾನು ಟಿ.ಬಿ.ಜಯಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರು ಯೋಜನೆ ಅಕ್ರಮದ ಬಗ್ಗೆ ಮಾತಾಡಿದ್ದಾರೆ. ಈ ಅಕ್ರಮದ ಬಗ್ಗೆ ವರದಿ ಕೊಟ್ಟ ಸದನ ಸಮಿತಿಯ ನೇತೃತ್ವ ವಹಿಸಿದವರು ಕೂಡ ಅವರೇ. ಅದಕ್ಕಾಗಿಯೇ ನಾನು ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುತ್ತೇನೆ. ನೀವು ರೈತರ ಪರವಾಗಿ ಇದ್ದರೆ, ತಕ್ಷಣ ನೈಸ್ ಹೆಚ್ಚುವರಿ ಜಮೀನು ವಾಪಸ್ ಪಡೆದು ಮೂಲ ರೈತರಿಗೆ ನೀಡಿ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 − two =
Remember me
