ಬೆಂಗಳೂರು:ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದಲ್ಲಿ ನಿಫಾ ವೈರಾಣು ಹರಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರೋಗ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಶಂಕಿತ ನಿಫಾ ಪ್ರಕರಣಗಳನ್ನು ದಾಖಲಿಸಿಕೊಂಡು, ಜಿಲ್ಲಾ ಕಣ್ಗಾವಲು ಘಟಕಕ್ಕೆ ಮಾಹಿತಿ ಒದಗಿಸಬೇಕು. ಕ್ಷಿಪ್ರ ಪ್ರತಿಕ್ರಿಯೆ ತಂಡ ಸಭೆಗಳನ್ನು ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಶಂಕಿತರ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಕಾಯ್ದಿರಿಸಬೇಕು. ಅಗತ್ಯ ಔಷಧಗಳ ಶೇಖರಣೆ ಮತ್ತು ನಿಫಾ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಗೆ ಸಂಬಂಧಿಸಿದಂತೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗುವ ನಿಫಾ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೆ ಯಾವುದೇ ನಿಫಾ ಮರಣ ಪ್ರಕರಣ ವರದಿಯಾಗಿಲ್ಲ. ಆದಾಗಿಯೂ ಬಾವಲಿ ಹಾಗೂ ಪ್ರಾಣಿಗಳಿಂದ ಬರುವ ಈ ರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:14 − 12 =
Remember me
