ಬೆಂಗಳೂರು:ಜು.14ರಿಂದ ಬೆಂಗಳೂರಿನಲ್ಲಿ ಹೇರಲಾಗಿದ್ದ ಲಾಕ್​ಡೌನ್ ನಾಳೆ (ಜು.22) ಮುಂಜಾನೆ 5ಗಂಟೆಗೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿಂದಿನ ಮಾರ್ಗಸೂಚಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ, ಇಂದು ಸಂಜೆ ಆದೇಶ ಹೊರಡಿಸಿದೆ.
ಕಂಟೇನ್​ಮೆಂಟ್​ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಮುಂದುವರಿಯಲಿದ್ದು, ಅದರ ಹೊರತಾದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳ ಪುನರಾರಂಭವಾಗಲಿದೆ ತಿಳಿಸಲಾಗಿದೆ.
ರಾಜ್ಯಾದ್ಯಂತ ನಾಳೆಯಿಂದ ರಾತ್ರಿ 9 ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ಕರ್ಫ್ಯೂ ಇರಲಿದೆ. ಹಾಗೇ ಪ್ರತಿ ಭಾನುವಾರ ಲಾಕ್​ಡೌನ್​ ಮುಂದುವರಿಯಲಿದೆ. ಹಾಗೇ, ಬೆಂಗಳೂರು ಸೇರಿ ಎಲ್ಲ ಜಿಲ್ಲೆ, ತಾಲೂಕು ಮಟ್ಟದಲ್ಲಿ ತರಕಾರಿ ಮಾರುಕಟ್ಟೆಗಳನ್ನು ಎಪಿಎಂಸಿ ಅಥವಾ ಸೂಕ್ತವಾದ ವಿಶಾಲ ಪ್ರದೇಶಗಳಿಗೆ ಸ್ಥಳಾಂತರಿಸಲಾಗುವುದು. ಜನಸಂದಣಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಮತ್ತು ಉದ್ಯಾನವನಗಳಲ್ಲಿ ಜಿಮ್​ ಸಾಧನಗಳು ಮತ್ತು ಕುಳಿತುಕೊಳ್ಳುವ ಬೆಂಚ್​​ಗಳ ಬಳಕೆಯನ್ನು ನಿಷೇಧಿಸಲಾಗುವುದು.
ಈ ಮಾರ್ಗಸೂಚಿ ನಿಯಮಗಳು ಜು.31ರವರೆಗೂ ಮುಂದುವರಿಯಲಿವೆ ಎಂದು ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ತಿಳಿಸಿದ್ದಾರೆ. (ಏಜೆನ್ಸೀಸ್​)
ನೆನಪಿರಲಿ ಪ್ರೇಮ್​ಗೆ ಪತ್ನಿ ಜ್ಯೋತಿಯಿಂದಲೇ ಜಾಕ್​ಪಾಟ್​…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
