ಬೆಂಗಳೂರು:ಕೇರಳದಲ್ಲಿ ಕರೊನಾ ಸೋಂಕು ಸ್ಫೋಟ, ಮೂರನೇ ಅಲೆ ಪ್ರವೇಶದ ಸಾಧ್ಯತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯವ್ಯಾಪಿ ಮತ್ತೆ ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಕರೊನಾತಂಕದ ಹಿನ್ನೆಲೆಯಲ್ಲಿ ಈ ಹಿಂದೆಯೇ ವಿಸ್ತರಣೆ ಮಾಡಿ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂ ಆಗಸ್ಟ್ 2ಕ್ಕೆ ಮುಗಿಯಲಿದೆ. ಆದರೆ ಈ ನಡುವೆ ಗಡಿ ಪ್ರದೇಶಗಳಲ್ಲಿ ಕರೊನಾ ಸೋಂಕು ಹೆಚ್ಚಳದ ಭೀತಿ ಆವರಿಸಿರುವುದರಿಂದ ಇನ್ನು ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚಿತ್ರಮಂದಿರಗಳಿಗೆ ಶೇ.50 ಆಸನ ಭರ್ತಿ ಅನುಮತಿ, ಪಬ್‌ಗಳಿಗೆ ಅವಕಾಶ ಇಲ್ಲದಿರುವುದು ಸೇರಿ ಈ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತರಿಂದ ಬೆಳಗಿನ ಜಾವ ಐದರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಈ ಸಂಬಂಧ ನಾಳೆ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಕರೊನಾ ತಡೆಗೆ ಬಿಗಿಕ್ರಮ ಕೈಗೊಂಡ ಸಿಎಂ; ವಿಡಿಯೋ ಕಾನ್ಫರೆನ್ಸ್​ ಮೂಲಕ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
