ಬೆಂಗಳೂರು:ರಾಜ್ಯದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ತಡೆ ಹಾಗೂ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಒಂದಾದ ಮೇಲೊಂದರಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಇಂದಿನಿಂದ ಕರೊನಾ ಕರ್ಫ್ಯೂ (ನೈಟ್ ಕರ್ಫ್ಯೂ) ಕೂಡ ವಿಧಿಸಲು ಮುಂದಾಗಿದೆ.
ಕರೊನಾ ತಡೆ ಹಿನ್ನೆಲೆಯಲ್ಲಿ ಏ. 10ರಿಂದ 20ರ ವರೆಗೆ ರಾಜ್ಯದ ಎಂಟು ಪ್ರಮುಖ ನಗರಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ರಾತ್ರಿಪಾಳಿಯ ನೌಕರರಿಗೆ ಕೆಲವು ಷರತ್ತುಗಳ ಮೇಲೆ ಕೆಲಸಕ್ಕೆ ಹೋಗಿ ಬರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಇದನ್ನೂ ಓದಿ:ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?
ರಾತ್ರಿಪಾಳಿಯ ಕೆಲಸಗಾರರನ್ನು ಕರೆದೊಯ್ಯುವ ಸಂಸ್ಥೆಯ ವಾಹನಗಳಲ್ಲಿ ಆ ಸಂಬಂಧ ಆಯಾ ಕಂಪನಿಗಳಿಂದ ಅಧಿಕೃತ ಪತ್ರ ಇರಬೇಕು. ರಾತ್ರಿ ಪಾಳಿಯ ಕೆಲಸದ ಮೇಲೆ ಓಡಾಡುವ ನೌಕರರು ತಮ್ಮ ಕಂಪನಿಗಳಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಜತೆಗೆ ಸಂಚಾರ ವೇಳೆ ಕೋವಿಡ್ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಮಾಸ್ಕ್​ ಧರಿಸಿರಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಇಂದು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ! ಎಲ್ಲೆಲ್ಲಿ ಚೆಕ್​ಪೋ​ಸ್ಟ್​ ಇರುತ್ತೆ ಗೊತ್ತಾ?

ರಾತ್ರಿ 10ರ ಬಳಿಕ ಜನರು ಬೇಕಾಬಿಟ್ಟಿ ಓಡಾಡುವಂತಿಲ್ಲ: ಕಮಲ್ ಪಂತ್

ರಾಜ್ಯದ ಹಲವೆಡೆ ಹತ್ತು ದಿನ ನೈಟ್ ಕರ್ಫ್ಯೂ; ನಿಯಮ ಪಾಲಿಸದಿದ್ದರೆ ಮುಂದಿದೆ ಲಾಕ್​ಡೌನ್​!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 8 =
Remember me
