ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ ಕೆಲವರ ಸ್ವಾರ್ಥಕ್ಕಾಗಿ ತಾರತುರಿಯಲ್ಲಿ ಮಂಗಳವಾರ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದ್ದಾರೆ.
ಈ ಪರೀಕ್ಷೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಪರೀಕ್ಷೆ ಬರೆಯುವ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆ ಕೊಡುವ ಹುನ್ನಾರ ಇದರಲ್ಲಿದೆ ಎಂದು ಆರೋಪಿಸಿದ್ದಾರೆ.
ಪರೀಕ್ಷೆ ಬರೆಯಲು ಅನೇಕ ದಿನಗಳಿಂದ ಪ್ರಾಮಾಣಿಕವಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ಅದರಲ್ಲಿಯೂ ವಿಕಲಚೇತನ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.
ರಜೆ ದಿನ ಹೊರತುಪಡಿಸಿ ಇತರೆ ದಿನಗಳಲ್ಲಿ ಪರೀಕ್ಷೆ ನಡೆಸಿದರೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೂ ಸಮಸ್ಯೆ ಆಗುತ್ತದೆ. ಈ ಬಗ್ಗೆ ಅಭ್ಯರ್ಥಿಗಳು ಹಲವು ದಿನಗಳಿಂದ ಪರೀಕ್ಷೆ ಮುಂದೂಡುವಂತೆ ಮನವಿ ಮಾಡುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೆಪಿಎಸ್‌ಸಿ ಪರೀಕ್ಷೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡಲೇ ಕ್ರಮ ವಹಿಸಿ ಎಲ್ಲ ಅಭ್ಯರ್ಥಿಗಳಿಗೆ ಅನುಕೂಲವಾಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
