ಬೆಂಗಳೂರು:ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪರಪ್ಪನ ಅಗ್ರಹಾರದ ಜಾಮರ್ ವ್ಯಾಪ್ತಿ ಇಳಿಕೆ: ಡಾ. ಜಿ ಪರಮೇಶ್ವರ್‌
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ, ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.
ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಎಚ್.ಡಿ. ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four − 2 =
Remember me
