ಬೆಂಗಳೂರು:ರಾಷ್ಟ್ರ ರಾಜಕಾರಣದಲ್ಲೇ ತೀವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದಯ ತಿರುವು ಪಡೆದುಕೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಿಖಿಲ್​ ಕುಮಾರಸ್ವಾಮಿ ಪ್ರಜ್ವಲ್​ ತನಿಖೆ ಎದುರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ನಿಖಿಲ್, ಘಟನೆ ಆದ ದಿನವೇ ಕುಮಾರಣ್ಣ, ಉಪ್ಪು ತಿಂದವರು ನೀರು ಕುಡಿಯಬೇಕು ಎಂದಿದ್ದರು. ಸಂಸದರು ಎಸ್‍ಐಟಿ ತನಿಖೆ ಎದರಿಸುವುದು ಸೂಕ್ತ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಿಎಸ್​ಕೆ ವಿರುದ್ಧ 27 ರನ್​ಗಳ ಭರ್ಜರಿ ಜಯ; ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​ ಹೇಳಿದ್ದಿಷ್ಟು
ಮಾಜಿ ಸಂಸದ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋದಲ್ಲಿ ವಿಚಾರವಾಗಿ, ಶಿವರಾಮೇಗೌಡ ಸರ್ಕಾರದಲ್ಲಿರುವ ಒಬ್ಬ ವ್ಯಕ್ತಿಯ ಹೆಸರು ಉಲ್ಲೇಖಿಸಿದ್ದಾರೆ. ಇಡೀ ರಾಜ್ಯದ ಜನ ಶಿವರಾಮೇಗೌಡರ ಆಡಿಯೋ ಕೇಳಿದ್ದಾರೆ. ಕೆಂಪುಕೋಟೆ ಮೇಲೆ ಭಾವುಟ ಹಾರಿಸಿದ ಕನ್ನಡದ ಹೆಮ್ಮೆಯ ಮಾಜಿ ಪ್ರಧಾನಿಗಳ ವಿರುದ್ಧ ಅವರ ಹೇಳಿಕೆ, ಅವರ ಸಂಸ್ಕೃತಿ, ಮನಸ್ಥಿತಿ ಹೇಗಿದೆ ಎನ್ನುವುದನ್ನು ತೋರಿಸುತ್ತದೆ. ರಾಜಕೀಯ ಮಾಡಿ, ಆದರೆ ಇನ್ನೊಬ್ಬರ ಸಾವನ್ನು ಬಯಸಿ ರಾಜಕೀಯ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಪೆನ್​ಡ್ರೈವ್​ ಬಡುಗಡೆ ಮಾಡಿದ ಬಳಿಕ ಸಂತ್ರಸ್ತೆಯರ ಮುಖವನ್ನು ಬ್ಲರ್​ ಮಾಡಬೇಕಿತ್ತು. ವಿಡಿಯೋ ಬಿಡುಗಡೆ ಮಾಡಿ ಸಂತ್ರಸ್ತೆಯರ ಮಾನ ಹರಾಜು ಹಾಕಿದ್ದು, ಯಾಕೆ ವಿಡಿಯೋ ರಿಲೀಸ್ ಮಾಡಿದವರ ವಿರುದ್ಧ ಯಾಕೆ ಕ್ರಮ ಜರುಗಿಸಿಲ್ಲ ಎಂದು ನಿಖಿಲ್​ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + 18 =
Remember me
