ಬೆಂಗಳೂರು:ಈ ಬಾರಿ ಹೀನಾಯ ಸೋಲನ್ನು ಅನುಭವಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಮ್ಮ ಯುವ ಜನತಾದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ, ತಮ್ಮ ರಾಜೀನಾಮೆಯನ್ನು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸಲ್ಲಿಸಿದ್ದು ಪಕ್ಷದ ಜತೆ ಸದಾ ನಿಲ್ಲಲಿದ್ದು ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.
ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟಲು ಸಹಕಾರ ನೀಡಲಾಗುವುದು ಎಂದು ತಮ್ಮ ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದು ಪಕ್ಷ ಮರು ನಿರ್ಮಾಣಮಾಡುವ ದಿಸೆಯಲ್ಲಿ ಈ ಹೆಜ್ಜೆಯನ್ನು ಇಟ್ಟಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ, ತಮ್ಮ ರಾಜೀನಾಮೆ ಪತ್ರದಲ್ಲಿ “ಪ್ರಸಕ್ತ ವಿಧಾನಸಭೆ ಚುನಾವಣೆ ಫಲಿತಾಂಶ ನನಗೆ ಅತೀವ ಬೇಸರ ಉಂಟು ಮಾಡಿದೆ ಎನ್ನುವುದರ ಜತೆಗೆ, ಪಕ್ಷವನ್ನು ಹೊಸದಾಗಿ ಮರು ನಿರ್ಮಾಣ ಮಾಡುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿದೆ ಎಂದು ವಿಶ್ವಾಸದಿಂದ ಹೇಳಬಯಸುತ್ತೇನೆ. ಇಷ್ಟು ದಿನ ಕರ್ನಾಟಕ ಪ್ರದೇಶ ಯುವ ಜನತಾದಳ (ಜಾತ್ಯತೀತ) ಘಟಕದ ಅಧ್ಯಕ್ಷನಾಗಿ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ತಮ್ಮಗಳ ಮಾರ್ಗದರ್ಶನದಿಂದ ನನ್ನ ಕೈಲಾದ ಮಟ್ಟಿಗೆ ಕರ್ತವ್ಯ ನಿರ್ವಹಿಸಿದ್ದೇನೆ. ಪಕ್ಷ ಸಂಘಟನೆ ಮಾಡಲು ಶ್ರಮಿಸಿದ್ದೇನೆ.

ಆದರೆ, ಸೋಲೇ ಅಂತಿಮವಲ್ಲ. ಈ ಚುನಾವಣೆಯ ಸೋಲನ್ನು ಮೆಟ್ಟಿ ಪಕ್ಷವನ್ನು ಬಲವಾಗಿ ಕಟ್ಟುವ ದಿಸೆಯಲ್ಲಿ ನಾವೆಲ್ಲರೂ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕಿದೆ, ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ನಾನು ಕರ್ನಾಟಕ ಪ್ರದೇಶ ಜನತಾದಳ (ಕರ್ನಾಟಕ) ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅದನ್ನು ತಾವು ಅಂಗೀಕಾರ ಮಾಡಬೇಕು ಎಂದು ಕೇಳಿಕೊಳ್ಳುತ್ತೇನೆ.
ನನ್ನ ಈ ನಿರ್ಧಾರವನ್ನು ತಾವು ಒಪ್ಪಿ ನವ ನಾಯಕತ್ವಕ್ಕೆ ಅನುವು ಮಾಡಿಕೊಟ್ಟು ಪಕ್ಷವನ್ನು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಒಟ್ಟಾಗಿ ಸಾಗಬೇಕಿದೆ ಎನ್ನುವುದು ನನ್ನ ವಿನಮ್ರ ಸಲಹೆ ಮತ್ತು ಮನವಿ. ತಮ್ಮ ಹಾಗೂ ವರಿಷ್ಠರ ಆಶಯ, ಪಕ್ಷದ ಹಿತದೃಷ್ಟಿಯಿಂದ ಸಂಘಟನೆ ಕೆಲಸಕ್ಕೆ ನಾನು ಸದಾ ಸಿದ್ಧ. ಯುವ ಸಮುದಾಯದ ಜತೆ ಸೇರಿ ಪಕ್ಷ ಕಟ್ಟುವುದಕ್ಕೆ ನಾನೆಂದೂ ಹಿಂಜರಿಯುವುದಿಲ್ಲ.
ನನ್ನ ಭಾವನೆಗಳನ್ನು ತಾವು ಗೌರವಿಸುವಿರಿ ಎನ್ನುವ ವಿಶ್ವಾಸದೊಂದಿಗೆ.. ಇಷ್ಟು ದಿನ ನನ್ನೊಂದಿಗೆ ಶ್ರಮಿಸಿ ಪಕ್ಷಕ್ಕಾಗಿ ಹೆಗಲು ಕೊಟ್ಟ ಎಲ್ಲಾ ಹಿರಿ, ಕಿರಿಯರಿಗೆ ನನ್ನ ಗೌರವಪೂರ್ವಕ ನಮನಗಳು.” ಎಂದು ಬರೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eleven =
Remember me
