ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರ ವಿವಾಹದ ಸಿದ್ಧತೆ ನಡೆಯುತ್ತಿದೆ.
ಅಂದವಾಗಿ ಮುದ್ರಿಸಿದ ವಿವಾಹ ಆಮಂತ್ರಣ ಪತ್ರಿಕೆಯನ್ನು ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಮನೆಯಲ್ಲಿ ದೇವರ ಮುಂದೆ ಇಟ್ಟು ಪೂಜೆ ನೆರವೇರಿಸಲಾಯಿತು. ದೇವೇಗೌಡ ದಂಪತಿ, ಎಚ್​.ಡಿ.ಕುಮಾರಸ್ವಾಮಿ ಹಾಗೂ ಡಾ.ಚಂದ್ರಶೇಖರ್​ ಇದ್ದರು.
ಪೂಜೆ ನಂತರ ಮೊದಲ ಆಮಂತ್ರಣ ಪತ್ರಿಕೆಯನ್ನು ದೇವೇಗೌಡ ದಂಪತಿ ಡಾ. ಚಂದ್ರಶೇಖರ್​ ಅವರಿಗೆ ನೀಡಿದರು ಎಂದು ತಿಳಿದು ಬಂದಿದೆ.
ನಿಖಿಲ್​ ಹಾಗೂ ರೇವತಿ ಲಗ್ನ ಪತ್ರಿಕೆಗಳನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮ ಅನಿಸಿಕೆಯಂತೆ ಮುದ್ರಿಸಿಕೊಂಡಿದ್ದಾರೆ. ಪುತ್ರನ ವಿವಾಹಕ್ಕೆ ಎಲ್ಲ ರಾಜ್ಯಗಳ ಸಿಎಂ ಹಾಗೂ ಪ್ರಧಾನಿ ಮೋದಿ ಅವರನ್ನು ಆಮಂತ್ರಿಸುತ್ತೇನೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಹಾಗೂ ಚನ್ನಪಟ್ಟಣ ನಡುವೆ ಇರುವ ಜಾನಪದ ಲೋಕ ಬಳಿಯ ಸಪ್ತಪದಿ ಮಂಟಪದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಏ.17ರಂದು ನಡೆಯಲಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
