ರಾಮನಗರ:ರಾಜ್ಯ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ರಾಜಕೀಯ ಪಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿದ್ದಾರೆ.
ಇನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಪ್ರಚಾರದ ವೇಳೆ ಹೊಸ ಬಾಂಬ್​ ಒಂದನ್ನು ಸಿಡಿಸಿದ್ದು ಬಿಜೆಪಿ-ಕಾಂಗ್ರೆಸ್​ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.
ರಾಮನಗರದ್ಲಲಿ ನಡೆದ ಪ್ರಚಾರ ಸಬೆ ವೇಳೆ ಮಾತನಾಡಿದ ನಿಖಿಲ್​ ನನ್ನನ್ನ ಸೋಲಿಸಲು ಬಿಜೆಪಿ-ಕಾಂಗ್ರೆಸ್​ ಹೊಂದಾಣಿಕೆ ಮಾಡಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಗೆ ಮತ ಹಾಕಿ ಅಂದಿದ್ದಾರೆ ಎಂದು ಆರೋಪಿಸಿದ್ದಾರೆ.
ನನಗೆ ಮತ ಹಾಕಲಿಲ್ಲ ಅಂದ್ರೂ ಪರವಾಗಿಲ್ಲ ಬಿಜೆಪಿಗೆ ಮತಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳ್ತಿದ್ದಾರೆ. ಕೆಲವು ಕಡೆ ಬಿಜೆಪಿಯವ್ರೂ ಕೂಡಾ ಕಾಂಗ್ರೆಸ್ ಗೆ ಮತಹಾಕಿ ಅಂತ ಪ್ರಚಾರ ಮಾಡ್ತಿದ್ದಾರೆ. ನಮ್ಮ ಮತಗಳನ್ನ ವಿಭಜನೆ ಮಾಡಲು ಕಾಂಗ್ರೆಸ್-ಬಿಜೆಪಿ ಈ ರೀತಿ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ನೀರಿನ ವಿಚಾರಕ್ಕೆ ಜಗಳ; ಮನನೊಂದು ಗೃಹಿಣಿ ಆತ್ಮಹತ್ಯೆ
ಕಳೆದ ಲೋಕಸಭೆ ಚುನಾವಣೆ ವೇಳೆ ಮಂಡ್ಯದಲ್ಲಿ ನನ್ನನ್ನು ಸೋಲಿಸಲು ಮಾಡಿದ ಕುತಂತ್ರವನ್ನೇ ಇಲ್ಲೂ ಮಾಡುತ್ತಿದ್ದಾರೆ. ನಾನು ಎಲ್ಲವನ್ನೂ ಬಹಿರಂಗವಾಗಿ ಚರ್ಚೆ ಮಾಡಲ್ಲ ಇದಕ್ಕೆ ಕ್ಷೇತ್ರದ ಮತದಾರರೇ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್​ನವರ ಕುತಂತ್ರದಿಂದ ಬೇಸತ್ತಿರೋ ಕಾರ್ಯಕರ್ತರು ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.
ಕನಕಪುರದಲ್ಲಿ ಜೆಡಿಎಸ್​-ಕಾಂಗ್ರೆಸ್​ ಹೊಂದಾಣಿಕೆ ಕುರಿತು ಸಚಿವ ಆರ್​. ಅಶೋಕ್​ ಹೇಳಿಕೆಗೆ ಪ್ರತಿಕ್ರಿಯಿಸಿ ಹೊಂದಾಣಿಕೆ ಮಾಡಿಕೊಂಡಿರೋದು ಅವರು ಮತ್ತು ಡಿ.ಕೆ. ಶಿವಕುಮಾರ್​. ಸುಮ್ಮನೆ ಕಾಟಾಚಾರಕ್ಕೆ ಬಂದು ಅರ್ಜಿ ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ಧಾರೆ.
ಗೆಲ್ತೀನಿ ಎಂಬ ವಿಶ್ವಾಸ ಇದ್ದಿದ್ದರೆ ಕನಕಪುರದಲ್ಲಿ ಮಾತ್ರ ಸ್ಪರ್ಧೆ ಮಾಡಬೇಕಿತ್ತು ಎರಡೂ ಕಡೆ ಅರ್ಜಿ ಹಾಕಿರೋದು ಹೊಂದಾಣಿಕೆ ಅಲ್ಲವೇ. ಕನಕಪುರದಲ್ಲಿ ಬಿಜೆಪಿಗೆ ನೆಲೆ ಇಲ್ಲ ಅವರಿಂದ ನಾವು ಕಲಿಯಬೇಕಿಲ್ಲ ಎಂದು ಸಚಿವ ಆರ್. ಅಶೋಕ್​ ಹೇಳಿಕೆಗೆ ನಿಖಿಲ್​ ಕುಮಾರಸ್ವಾಮಿ ಟಾಂಗ್​ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 11 =
Remember me
