ಬೆಂಗಳೂರು:ರಾಮನಗರ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ತಂದೆ ಎಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಡಿಕೆ… ಡಿಕೆ… ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್‌ ಹಿರಿಯ ನಾಯಕರನ್ನು ಕಡೆಗಣಿಸುತ್ತದೆ… ಅದೇ ಪರಿಸ್ಥಿತಿ ಜಗದೀಶ್ ಶೆಟ್ಟರ್​ಗೂ ಎದುರಾಗಲಿದೆ! ಸಿಎಂ ಬೊಮ್ಮಾಯಿ
ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಶೆಟ್ಟರ್ ತಾವೂ ಗೆದ್ದು ಬೇರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಹಾಯ ಮಾಡಲಿ: ಖರ್ಗೆ
ನಿಖಿಲ್ ಕುಮಾರಸ್ವಾಮಿ ನಾಮಪತ್ರದ ಬಳಿಕ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಯದಲ್ಲಿ ಪೂಜೆ ಸಲ್ಲಿಸಿ, ಚನ್ನಪಟ್ಟಣದ ದರ್ಗಾ ಹಾಗೂ ಚರ್ಚ್​ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶೇರು ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ವರೆಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ:ದೇಶದ ಅತಿದೊಡ್ಡ ಸುರಂಗಮಾರ್ಗ ಜೊಜಿಲಾ; ಲಡಾಖ್-ಕಾಶ್ಮೀರ ನಡುವೆ ಸರ್ವಋತು ಸಂಚಾರಕ್ಕೆ ತಯಾರಿ ಜೋರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
