ಬೆಂಗಳೂರು: ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡಿದೆ. ಈ ಕುರಿತು ನಡೆಯುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್‌ಔಆಮಿ ಹೇಳಿದ್ದಾರೆ.
ಈ ವಿಚಾರದಲ್ಲಿ ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ತಿಳಿಸಿದ್ದಾರೆ.
2006-07ರಲ್ಲೇ 310ಕೋಟಿ ರೂ.ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿ.ವಿ. ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ ಮಾ.25,2019ರಂದು ಸಿಎಂ ಆಗಿದ್ದ ಕುಮಾರಸ್ವಾಮಿ ಆ ಯೋಜನೆಯ ವೆಚ್ಚವನ್ನು 540 ಕೋಟಿಗೆ ಹೆಚ್ಚಿಸಿದ್ದರು.ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಡಿಕೆ ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. ಡಿ.13, 2018ರಲ್ಲಿ 450 ಕೋಟಿ ರೂ.ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಸ್ವಾಮಿ ಕನಕಪುರಕ್ಕೂ ಮಂಜೂರು ಮಾಡಿದ್ದರು.
ಬಳಿಕ ಬಿಜೆಪಿ ಸರ್ಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿ.ವಿ. ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರ್ಕಾರ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ ಈ ಸರ್ಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ? ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 4 =
Remember me
