ಮೈಸೂರು:ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರ, ಹುಣಸೂರು ಜೆಡಿಎಸ್ ಕ್ಷೇತ್ರದ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ ಹುಟ್ಟು ಹಬ್ಬದ ಹಿನ್ನೆಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಿದೆ. ಸಮಾವೇಶದಲ್ಲಿ ಜಿ.ಡಿ.ಹರೀಶ್‌ಗೌಡ ಮಾತನಾಡುತ್ತಾ, ನಿಖಿಲ್ ಕುಮಾರಸ್ವಾಮಿ ಮುಂದೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ಸಿಎಂ ಆಗುವ ಎಲ್ಲಾ ಲಕ್ಷಣಗಳು ಅವರಿಗಿದೆ ಎಂದು ಹೇಳಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಮಾತನಾಡುತ್ತಾ, ನಿಖಿಲ್ ಹಾಗೂ ಹರೀಶ್‌ ಗೌಡ ಲವ- ಕುಶ ಇದ್ದಂತೆ. ಹರೀಶ್‌ ಗೌಡ ಹುಣಸೂರಿನಲ್ಲಿ ಗೆದ್ದೇ ಗೆಲ್ಲುತ್ತಾರೆ. ನಿಖಿಲ್ ರಾಜ್ಯದಲ್ಲೇ ದೊಡ್ಡ ಮಟ್ಟದ ನಾಯಕರಾಗಿ ಬೆಳೆಯುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡುತ್ತಾ, ಜೆಡಿಎಸ್​ನ ಮೈಸೂರು ಭಾಗಕ್ಕೆ ಜಿ.ಟಿ.ದೇವೇಗೌಡ ಅವರು ಒಂದು ಶಕ್ತಿ ಎಂದು ನನಗೆ ಕುಮಾರಣ್ಣ ಹೇಳಿ ಕಳುಹಿಸಿದ್ದಾರೆ. ಜಿಟಿಡಿ ಅವರಿಗೆ ಕಾಂಗ್ರೆಸ್ ನಾಯಕರು ಹಾಕಿದ್ದ ಸವಾಲಿಗೆ ನೀವೆಲ್ಲ ಉತ್ತರ ನೀಡಿದ್ದೀರಿ. ಕಳೆದ ಐತಿಹಾಸಿಕ ಚುನಾವಣೆಯಲ್ಲಿ ಜಿಟಿಡಿ ಅವರನ್ನು ಗೆಲ್ಲಿಸಿ ಉತ್ತರ ನೀಡಿದ್ದೀರಿ ಎಂದು ಹೇಳಿದರು.
ಈ ಬಾರಿಯ ವಿಧನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 40 ರಿಂದ 50 ಸ್ಥಾನಕ್ಕೆ ಸೀಮಿತವಾಗುವುದಿಲ್ಲ. 123 ಸ್ಥಾನವನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪಂಚರತ್ನ ಯಾತ್ರೆಯ ಮೂಲಕ ಕುಮಾರಸ್ವಾಮಿ ಅವರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕಡಿಮೆ ಅವಧಿಯಲ್ಲಿ ಕುಮಾರಸ್ವಾಮಿ ಅವರು ನೀಡಿರುವ ಜನಪರ ಯೋಜನೆಗಳು ಇಂದಿಗೂ ಮನೆ ಮಾತಾಗಿದೆ. ಕುಮಾರಸ್ವಾಮಿ ಅವರ ಏಕಾಂಗಿ ಹೋರಾಟಕ್ಕೆ ನೀವೆಲ್ಲರೂ ಸಾಥ್ ನೀಡಿ ಎಂದರು.
ನಿಖಿಲ್ ರಾಮನಗರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದು ಜನರ ಕೂಗಾಗಿತ್ತು. ಜನರ ಆಶಯಕ್ಕೆ ಸ್ಪಂದಿಸಿ ರಾಮನಗರದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
