ಬೆಂಗಳೂರು:ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಧರಿಸಿದ್ದರೆನ್ನಲಾದ ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಪಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್ ಅನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.ಇವತ್ತು ಬೆಳಗ್ಗಿನಿಂದ ಚಿತ್ರನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ. ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.
ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ ನದ್ದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ತಿಳಿಸಿದರು.
ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಇಂಥ ಪೆಂಡೆಂಟ್ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಹೇಳಿದರು.
ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೂ ಗೊತ್ತಿದೆ. ಅಂಥ ವಸ್ತುಗಳನ್ನ ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ. ಹೀಗಾಗಿ ನಮಗೆ ಯಾವುದೇ ಗಾಬರಿ ಇಲ್ಲ, ಆತಂಕ ಇಲ್ಲ. ಅಧಿಕಾರಿಗಳು ಎ್ಎಸ್‌ಎಲ್‌ಗೆ ಕಳಿಸಿ ವಾಸ್ತವಾಂಶ ಪತ್ತೆ ಹಚ್ಚಲಿ. ಇದರಲ್ಲಿ ಅನುಮಾನ ಎನ್ನುವ ಮಾತು ಬರಬಾರದು. ಮದುವೆ ಸಂದರ್ಭದಲ್ಲಿ ನಿಖಿಲ್ ಅವರಿಗೆ ಉಡುಗೊರೆ ಬಂದಿರುವ ಪೆಂಡೆಂಟ್ ಅದು. ಯಾರೋ ಸಂಬಂಧಿಕರು ಕೊಟ್ಟಿದ್ದಾರೆ. ನಿಖಿಲ್ ಅವರು ಒಡವೆ ಹಾಕಲ್ಲ, ಅವರಿಗೆ ಒಡವೆ ಶೋಕಿ ಇಲ್ಲ. ಇವತ್ತು ಬೆಳಗ್ಗೆ ನನ್ನ ಸೊಸೆಯರ ಬಳಿ ಕೇಳಿ ಇದನ್ನು ತೆಗೆದುಕೊಂಡೆ ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
