ಬೆಂಗಳೂರು:ನನಗಿವತ್ತು ತುಂಬ ಸಂತೋಷದ ದಿನ. ಹಿರಿಯರ ಆಶಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದೇನೆ ಎಂದು ನಿಖಿಲ್​ ಕುಮಾರಸ್ವಾಮಿ ಹೇಳಿದರು.
ತಾಜ್​ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಅದ್ದೂರಿ ಸಮಾರಂಭದ ಬಳಿಕ ಮಾತನಾಡಿದ ಅವರು, ನಮ್ಮ ಅಜ್ಜಿ-ತಾತ, ಅಪ್ಪ-ಅಮ್ಮನಂತೆ ನಾವೂ ಇರುತ್ತೇವೆ. ಮದುವೆ ಎನ್ನುವುದು ಎಲ್ಲರ ಜೀವನದಲ್ಲಿ ಒಂದು ಮಹತ್ತರವಾದ ಘಟ್ಟ. ಈ ಸಂದರ್ಭದಲ್ಲಿ ನನ್ನನ್ನು ಪ್ರೀತಿಸುವ ಎಲ್ಲರಿಗೂ ಊಟ ಹಾಕಿಸಬೇಕು ಎಂಬ ಆಸೆ ಇತ್ತು. ಅದು ಈಡೇರುತ್ತಿದೆ ಎಂದರು.
ಕಳೆದ ಕೆಲವು ದಿನಗಳಿಂದ ನಾನು ರೇವತಿಯವರೊಂದಿಗೆ ಮಾತನಾಡುತ್ತಿದ್ದೇನೆ. ಸಂಪ್ರದಾಯಸ್ಥ, ಸುಸಂಸ್ಕೃತ ಗುಣಗಳಿರುವ ಹುಡುಗಿ. ತುಂಬ ಚೆನ್ನಾಗಿ ನಮ್ಮೊಂದಿಗೆ ಹೊಂದಿಕೊಂಡು ಹೋಗುತ್ತಾರೆ ಎಂಬ ನಂಬಿಕೆ ಇದೆ. ಇಂತಹ ಹುಡುಗಿ ಸಿಗಲು ನಾನು ಪುಣ್ಯ ಮಾಡಿದ್ದೆ ಎಂದು ನಿಖಿಲ್ ಹೇಳಿದರು. (ದಿಗ್ವಿಜಯ ನ್ಯೂಸ್​)
ನಿಖಿಲ್​ ಕುಮಾರಸ್ವಾಮಿ- ರೇವತಿ ನಿಶ್ಚಿತಾರ್ಥ; ರಾಜಕೀಯ, ಸಿನಿಮಾ, ಉನ್ನತಾಧಿಕಾರಿಗಳ ಉಪಸ್ಥಿತಿ

PHOTOS| ಬೆಂಗಳೂರಿನಲ್ಲಿ ನಡೆದ ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥದ ಫೋಟೋಗಳ ಝಲಕ್​ ಇದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
